Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ, ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು’ ಎಂದು ಹೇಳುವೆನು ಅಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ,’ ಎಂದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನ್ನನ್ನು ನಿನ್ನ ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎಂದು ಹೇಳುವೆನು ಅಂದುಕೊಂಡು ಎದ್ದು ತನ್ನ ತಂದೆಯ ಕಡೆಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ಮಗನೆಂದು ಕರೆಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ. ನೀನು ನನ್ನನ್ನು ನಿನ್ನ ಸೇವಕರಲ್ಲಿ ಒಬ್ಬನನ್ನಾಗಿ ಸೇರಿಸಿಕೊ ಎಂದು ಹೇಳುವೆನು’ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಸಿಕೊಳ್ಳುವುದಕ್ಕೆ ಯೋಗ್ಯನಲ್ಲ; ನನ್ನನ್ನು ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎನ್ನುವೆನು,’ ಎಂದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾಕಾ ತುಜೊ ಲೆಕ್, ಮನುನ್ ಘೆತಲಿ ಮರ್‍ಯಾದ್ ನಾ, ಮಾಕಾ ತುಜ್ಯಾ ಎಕ್ ಆಳಾಚ್ಯಾ ಸರ್ಕೊ ಮನುನ್ ಘೆ ಮನ್ತಾ” ಮನುಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:19
13 ತಿಳಿವುಗಳ ಹೋಲಿಕೆ  

ಆದಕಾರಣ ನಾನು ಆಡಿದ್ದನ್ನು ತಿರಸ್ಕರಿಸಿ ಧೂಳಿನಲ್ಲಿಯೂ, ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ” ಎಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.


ನಿನ್ನ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು, ಬೇರೆ ಸಹಸ್ರದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಹೊಸ್ತಿಲಲ್ಲಿ ಬಿದ್ದುಕೊಂಡಿರುವುದೇ ಲೇಸು.


ಹೀಗಿರುವುದರಿಂದ ದೇವರ ಬಲವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ಎತ್ತುವನು.


ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.


ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.


ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.


ಎದ್ದು ತನ್ನ ತಂದೆಯ ಕಡೆಗೆ ಬಂದನು. “ಅವನು ಇನ್ನೂ ದೂರದಲ್ಲಿರುವಾಗ ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು, ಅವನಿಗೆ ಬಹಳವಾಗಿ ಮುದ್ದಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು