Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 15:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅದೇನಂದರೆ - ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದು ಹೋದರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳಿವೆ ಎಂದು ತಿಳಿದುಕೊಳ್ಳೋಣ. ಆ ಕುರಿಗಳಲ್ಲಿ ಒಂದು ಕಳೆದುಹೋದರೆ, ಅವನು ಉಳಿದ ತೊಂಭತ್ತೊಂಭತ್ತು ಕುರಿಗಳನ್ನು ಅಲ್ಲೇ ಬಿಟ್ಟು ಕಳೆದುಹೋದ ಒಂದು ಕುರಿಗೋಸ್ಕರ ಹುಡುಕುತ್ತಾ ಹೋಗುವನು. ಆ ಕುರಿಯು ಸಿಕ್ಕುವ ತನಕ ಅವನು ಅದಕ್ಕಾಗಿ ಹುಡುಕುತ್ತಲೇ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 “ತುಮ್ಚ್ಯಾತ್ಲ್ಯಾ ಎಕ್ಲ್ಯಾಕ್ಡೆ ಸೆಂಬರ್ ಬಕ್ರಿ ಹಾತ್ ಮನುವಾ, ಅನಿ ತ್ಯಾತುರ್‍ಲೆ ಎಕ್ ಬಕ್ರೆ ಕಳದ್ಲೆ ತರ್ ತೊ ಕಾಯ್ ಕರ್‍ತಾ? ತ್ಯಾ ನ್ಹವದಾರ್ ನ್ಹವ್ ಬಕ್ರ್ಯಾಕ್ನಿ ಥಯ್ಚ್ ಸೊಡುನ್, ಕಳ್ದುನ್ ಗೆಲ್ಲ್ಯಾ ಎಕುಚ್ಎಕ್ ಬಕ್ರ್ಯಾಕ್, ಗಾವಿ ಪತರ್ ಹುಡ್ಕುಕ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 15:4
19 ತಿಳಿವುಗಳ ಹೋಲಿಕೆ  

“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ನೀವು ದಾರಿತಪ್ಪಿದ ಕುರಿಗಳಂತೆ ಇದ್ದವರು. ಆದರೆ ಈಗ ನೀವು ತಿರುಗಿಕೊಂಡು ನಿಮ್ಮ ಆತ್ಮಗಳ ಕುರುಬನೂ ಪಾಲಕನೂ ಆಗಿರುವಾತನ ಬಳಿಗೆ ಬಂದಿದ್ದೀರಿ.


ಅದಕ್ಕಾತನು, “ನಿಮ್ಮಲ್ಲಿ ಯಾರಿಗಾದರೂ ಒಂದೇ ಒಂದು ಕುರಿ ಇದ್ದು ಅದು ಸಬ್ಬತ್ ದಿನದಲ್ಲಿ ಗುಂಡಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೇ ಇರುವನೇ?


“ನೀವು ನನ್ನ ಕುರಿಗಳು, ನನ್ನ ಮೇವಿನ ಮಂದೆಯ ಕುರಿಗಳು; ನರಪ್ರಾಣಿಗಳಾದ ನಿಮಗೆ ನಾನು ದೇವರು ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ.”


ನಾನು ತಪ್ಪಿಹೋದ ಕುರಿಯಂತೆ ಅಲೆಯುತ್ತಿದ್ದೇನೆ, ನಿನ್ನ ಸೇವಕನನ್ನು ಪರಾಂಬರಿಸು. ನಾನು ನಿನ್ನ ಆಜ್ಞೆಗಳನ್ನು ಮರೆಯುವುದಿಲ್ಲ.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ನನ್ನ ಜನರು ತಪ್ಪಿಸಿಕೊಂಡ ಕುರಿಗಳು; ಪಾಲಕರು ಅವರನ್ನು ದಾರಿತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ; ನನ್ನ ಜನರು ತಮ್ಮ ಹಕ್ಕೆಯನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಲಿದ್ದಾರೆ.


ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ “ಅಯ್ಯೋ, ನನ್ನ ಮಂದೆಯು ಕೊಳ್ಳೆಯಾದವು, ಕಾಡಿನ ಸಕಲ ಮೃಗಗಳಿಗೆ ತುತ್ತಾದವು, ಕುರುಬನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾಯಿತು, ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ, ಅವರು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಂಡರೇ ಹೊರತು ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.”


ಆದ್ದರಿಂದ ಎಲೈ ಮನುಷ್ಯನೇ, ಮತ್ತೊಬ್ಬರಲ್ಲಿ ದೋಷ ಹುಡುಕುವ ನೀನು ಯಾವನಾದರೂ ಸರಿಯೇ, ನಿನಗೆ ಅದರಿಂದ ಕ್ಷಮೆಯಿಲ್ಲ. ಯಾಕೆಂದರೆ, ಮತ್ತೊಬ್ಬರಲ್ಲಿ ದೋಷ ಹುಡುಕುವುದರಿಂದ ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು. ಮತ್ತೊಬ್ಬರಲ್ಲಿ ದೋಷವೆಣಿಸುವ ನೀನು ಆ ದೋಷಗಳನ್ನೇ ಮಾಡುತ್ತೀಯಲ್ಲಾ.


ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.


ನೀವು ದುರ್ಬಲವಾದವುಗಳನ್ನು ಬಲಗೊಳಿಸುವುದಿಲ್ಲ, ರೋಗದವುಗಳನ್ನು ಸ್ವಸ್ಥಮಾಡುವುದಿಲ್ಲ, ಮುರಿದ ಅಂಗಗಳನ್ನು ಕಟ್ಟುವುದಿಲ್ಲ, ಕಳೆದು ಹೋದವುಗಳನ್ನು ಹುಡುಕುವುದಿಲ್ಲ, ಓಡಿಸಿದನ್ನು ನೀವು ಹಿಂದಕ್ಕೆ ತರುವುದಿಲ್ಲ, ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.


ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು