Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 16:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಫರಿಸಾಯರು ಹಣದಾಸೆಯುಳ್ಳವರಾಗಿದ್ದರಿಂದ ಈ ಮಾತುಗಳನ್ನೆಲ್ಲಾ ಕೇಳಿ ಆತನನ್ನು ಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ ತಾವು ಹಣದಾಶೆಯುಳ್ಳವರಾಗಿದ್ದದರಿಂದ ಹಾಸ್ಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಫರಿಸಾಯರು ಈ ಎಲ್ಲಾ ಸಂಗತಿಗಳನ್ನು ಕೇಳುತ್ತಿದ್ದರು. ಫರಿಸಾಯರೆಲ್ಲರು ಹಣದಾಸೆ ಉಳ್ಳವರಾಗಿದ್ದರಿಂದ ಅವರು ಯೇಸುವನ್ನು ಟೀಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಹೆ ಸಗ್ಳೆ ಆಯ್ಕುನ್, ಪೈಸ್ಯಾಂಚೊ ಪ್ರೆಮ್ ಕರ್‍ತಲ್ಯಾ ಫಾರಿಜೆವಾನಿ, ಜೆಜುಕ್ ನಕ್ಕಲ್ ಕರ್‍ಲ್ಯಾನಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 16:14
18 ತಿಳಿವುಗಳ ಹೋಲಿಕೆ  

ಜನರೆಲ್ಲರೂ ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು “ಅವನು ಮತ್ತೊಬ್ಬರನ್ನು ರಕ್ಷಿಸಿದನು, ಅವನು ದೇವರು ಆರಿಸಿಕೊಂಡ ಕ್ರಿಸ್ತನೇ ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ” ಎಂದು ಗೇಲಿಮಾಡಿದರು.


ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ.


ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು, ಬೇಡಿ, ಸೆರೆಮನೆವಾಸಗಳನ್ನು ಅನುಭವಿಸಿದರು.


ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,


ಜನರು ಆಕೆ ಸತ್ತಳೆಂದು ತಿಳಿದುಕೊಂಡಿದ್ದರಿಂದ ಆತನನ್ನು ಪರಿಹಾಸ್ಯಮಾಡಿದರು.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಗರ್ವಿಷ್ಠರು ನನ್ನನ್ನು ಬಹಳವಾಗಿ ಅಪಹಾಸ್ಯ ಮಾಡಿದರು, ಆದರೂ ನಾನು ನಿನ್ನ ಧರ್ಮಶಾಸ್ತ್ರವನ್ನು ಬಿಡಲಿಲ್ಲ.


“ಹೊರಗೆ ಹೋಗಿರಿ; ಹುಡುಗಿ ಸತ್ತಿಲ್ಲ ನಿದ್ರಿಸುತ್ತಿದ್ದಾಳೆ” ಅಂದನು. ಅದಕ್ಕೆ ಅವರು ಆತನನ್ನು ಪರಿಹಾಸ್ಯ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು