ಲೂಕ 16:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೇಸು ಫರಿಸಾಯರಿಗೆ ಹೀಗೆಂದನು, “ನೀವು ಜನರ ಮುಂದೆ ನಿಮ್ಮನ್ನು ಒಳ್ಳೆಯವರೆಂದು ತೋರಿಸಿಕೊಳ್ಳುತ್ತೀರಿ. ಆದರೆ ನಿಜವಾಗಿಯೂ ನಿಮ್ಮ ಹೃದಯದಲ್ಲಿರುವುದು ದೇವರಿಗೆ ಗೊತ್ತು. ಜನರ ದೃಷ್ಟಿಯಲ್ಲಿ ಅಮೂಲ್ಯವಾದುವುಗಳು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಜೆಜುನ್ ತೆಂಕಾ “ಲೊಕಾಂಚ್ಯಾ ಡೊಳ್ಯಾಕ್ನಿ ತುಮಿ ತುಮ್ಕಾಚ್ ಬರಿ ಮಾನ್ಸಾ ಮನುನ್ ದಾಕ್ವುನ್ ದಿತ್ಯಾಶಿ, ಖರೆ, ದೆವಾಕ್ ತುಮ್ಚೊ ಮನ್ ಕಸೊ ಹಾಯ್ ಮನ್ತಲೆ ಗೊತ್ತ್ ಹಾಯ್, ಮಾನ್ಸಾನಿ ಲೈ ಮೊಟ್ಯಾ ಕಿಮ್ತಿಚೆ ಮನುನ್ ಯವಜಲ್ಲ್ಯಾಚಿ ಕಿಮ್ಮತ್ ದೆವಾಚ್ಯಾ ನದ್ರೆತ್ ಕಾಯ್ಬಿ ನ್ಹಯ್”. ಅಧ್ಯಾಯವನ್ನು ನೋಡಿ |
ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.