ಲೂಕ 16:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಬಳಿಕ ಮತ್ತೊಬ್ಬನನ್ನು, ‘ನೀನು ಎಷ್ಟು ಕೊಡಬೇಕು?’ ಎಂದು ಕೇಳಲು ಅವನು, ‘ನೂರು ಖಂಡುಗ ಗೋದಿ’ ಅಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಎಂದು ಬರೆ’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬಳಿಕ ಮತ್ತೊಬ್ಬನನ್ನು - ನೀನು ಏನು ಕೊಡಬೇಕು ಎಂದು ಕೇಳಲು ಅವನು - ನೂರು ಖಂಡುಗ ಗೋದಿ ಅಂದಾಗ ಅವನಿಗೆ - ಈ ನಿನ್ನ ಪತ್ರವನ್ನು ತೆಗೆದುಕೊಂಡು ಎಂಭತ್ತು ಖಂಡುಗ ಅಂತ ಬರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಬಳಿಕ ಆ ಮೇಲ್ವಿಚಾರಕನು ಎರಡನೆಯವನಿಗೆ, ‘ನೀನು ನನ್ನ ಯಜಮಾನನಿಗೆ ಎಷ್ಟು ಕೊಡಬೇಕಾಗಿದೆ’ ಎಂದು ಕೇಳಿದನು. ಎರಡನೆಯವನು, ‘ನಾನು ಅವನಿಗೆ ಅರವತ್ತುಸಾವಿರ ಕಿಲೋಗ್ರಾಂ ಗೋಧಿ ಕೊಡಬೇಕು’ ಎಂದು ಉತ್ತರಿಸಿದನು. ಆಗ ಆ ಮೇಲ್ವಿಚಾರಕನು ಅವನಿಗೆ, ‘ನಿನ್ನ ಲೆಕ್ಕಪತ್ರ ಇಲ್ಲಿದೆ. ನೀನು ಅದನ್ನು ಕಡಿಮೆ ಮಾಡು. ಐವತ್ತುಸಾವಿರ ಎಂದು ಬರೆ’ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಮಾನಾ ತೆನಿ ಅನಿ ಎಕ್ಲ್ಯಾಕ್ ಬಲ್ವುಲ್ಯಾನ್, “ಅನಿ ತಿಯಾ ಕವ್ಡೆ ರಿನ್ ದಿತಲೆ ಹಾಯ್?” ಮನುನ್ ಇಚಾರ್‍ಲ್ಯಾನ್, ತೆನಿ “ಹಜಾರ್ ಚಿಲಾ ಘಂವ್” ಮಟ್ಲ್ಯಾನ್. ತ್ಯಾ ಅಳಾನ್ “ಘೆ ತುಜೊ ಲೆಕ್ಕ್ ಪತ್ರ್, ಅನಿ ಆಟ್‍ಸೆ ಚಿಲಾ ಮನುನ್ ಲಿವ್” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |