Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ, “ದೇವರ ರಾಜ್ಯವು ನೀವು ಗಮನಿಸುತ್ತಾ ಕಾಯುತ್ತಿರುವಾಗ ಪ್ರತ್ಯಕ್ಷವಾಗಿ ಬರುವಂಥದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ದೇವರ ರಾಜ್ಯವು ಯಾವಾಗ ಬರುವದೆಂದು ಫರಿಸಾಯರು ಆತನನ್ನು ಕೇಳಿದಾಗ ಆತನು ಅವರಿಗೆ - ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವಂಥದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಫರಿಸಾಯರಲ್ಲಿ ಕೆಲವರು ಯೇಸುವನ್ನು, “ದೇವರ ರಾಜ್ಯವು ಯಾವಾಗ ಬರುವುದು?” ಎಂದು ಕೇಳಿದರು. ಯೇಸು ಅವರಿಗೆ, “ದೇವರ ರಾಜ್ಯವು ಬರುತ್ತಿದೆ, ಆದರೆ ನಿಮ್ಮ ಕಣ್ಣುಗಳಿಗೆ ಕಾಣಿಸುವಂತೆ ಅದು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಒಂದು ದಿನ, ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಯೇಸುವನ್ನು ಕೇಳಲು, ಅವರಿಗೆ ಉತ್ತರವಾಗಿ ಯೇಸು, “ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವುದಿಲ್ಲ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಎಗ್ಧಾ ಉಲ್ಲ್ಯಾಸ್ಯಾ ಫಾರಿಜೆವಾನಿ, ಜೆಜುಕ್, “ದೆವಾಚೆ ರಾಜ್ ಕನ್ನಾ ಯೆತಾ” ಮನುನ್ ಇಚಾರ್‍ಲ್ಯಾನಿ. ತನ್ನಾ ತೆಚೊ ಜವಾಬ್ ಕಾಯ್ ಮಟ್ಲ್ಯಾರ್, “ದೆವಾಚೆ ರಾಜ್ ಕೊನಾಕ್ಬಿ ದಿಸುನ್ಗೆತ್ ಯೆಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:20
9 ತಿಳಿವುಗಳ ಹೋಲಿಕೆ  

ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.


ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದರಿಂದಲೂ ಇನ್ನೂ ಒಂದು ಸಾಮ್ಯವನ್ನು ಅವರಿಗೆ ಹೇಳಿದನು.


“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.


ಆತನು ಸಬ್ಬತ್ ದಿನದಲ್ಲಿ ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಗೆ ಊಟಕ್ಕೆ ಹೋದಾಗ ಅವರು ಆತನನ್ನು ಹೊಂಚಿನೋಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು