Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವುದಕ್ಕೆ ಇಳಿದು ಬರಬಾರದು. ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರುಗಿ ಹಿಂದಕ್ಕೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆ ದಿನದಲ್ಲಿ ಮಾಳಿಗೆಯ ಮೇಲೆ ಇರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳುವದಕ್ಕೆ ಇಳಿದು ಬರಬಾರದು; ಅದೇ ಪ್ರಕಾರ ಹೊಲದಲ್ಲಿರುವವನು ಸಹ ತಿರಿಗಿ ಹಿಂದಕ್ಕೆ ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಆ ದಿನದಲ್ಲಿ, ಮಾಳಿಗೆಯ ಮೇಲಿರುವವನು ಮನೆಯೊಳಗಿರುವ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಹೋಗದಿರಲಿ. ಹೊಲದಲ್ಲಿರುವವನು ತನ್ನ ಮನೆಗೆ ಮರಳಿ ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 “ತ್ಯಾ ದಿಸ್ ಜೊ ಮಾನುಸ್, ಅಪ್ನಾಚ್ಯಾ ಘರಾಚ್ಯಾ ಮ್ಹಾಳ್ಗಿರ್ ಬಸ್ಲಾ, ತೊ ಅಪ್ನಾಚಿ ಸಾಮಾನಾ ಹಾನುಕ್ ಮನುನ್ ಉತ್ರುನ್ ಘರಾತ್ ಜಾಯ್‌ನಸ್ತಾನಾ ರಾಂವ್ದಿತ್, ತಸೆಚ್ ಜೊ ಮಾನುಸ್ ಭಾಯ್ರ್ ಶೆತಾತ್ ಹಾಯ್, ತೊ ಅನಿ ಪರ್ತುನ್ ಘರಾಕ್ ಯೆಯ್ನಸ್ತಾನಾ ರಾವ್ನದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:31
8 ತಿಳಿವುಗಳ ಹೋಲಿಕೆ  

ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ. ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ. ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ.


ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”


ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು?


“ಈ ಕಾರಣದಿಂದ, ನಮ್ಮ ಜೀವನಕ್ಕೆ ಏನು ಊಟಮಾಡಬೇಕು, ಏನು ಕುಡಿಯಬೇಕು, ನಮ್ಮ ದೇಹರಕ್ಷಣೆಗಾಗಿ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದುದಲ್ಲವೇ.


ಯೆಹೋವನ ಆ ಮಾತಿಗೆ ಸೈತಾನನು, “ಚರ್ಮಕ್ಕೆ ಚರ್ಮ ಎಂಬಂತೆ ಒಬ್ಬ ಮನುಷ್ಯನು ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೋಸ್ಕರ ತನ್ನ ಸರ್ವಸ್ವವನ್ನೂ ಕೊಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು