Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕರ್ತನು, “ಸಾಸಿವೇ ಕಾಳಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೊ’ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಭುವು ಅವರಿಗೆ ಹೀಗೆಂದನು: “ನಿಮ್ಮ ನಂಬಿಕೆ ಸಾಸಿವೆ ಕಾಳಷ್ಟು ದೊಡ್ಡದಾಗಿದ್ದರೆ, ನೀವು ಈ ಅತ್ತಿಮರಕ್ಕೆ, ‘ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿದರೂ ಅದು ನಿಮಗೆ ವಿಧೇಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತನ್ನಾ ಜೆಜುನ್, “ತುಮ್ಕಾ ಖಾಲಿ ಎಕ್ ಸಾಸಾವಾಚ್ಯಾ ಭ್ಹಿಂಯಾ ಎವ್ಡೊ ವಿಶ್ವಾಸ್ ರ್‍ಹಾಲ್ಯಾರ್, ತುಮಿ ಎಕ್ ವಡ್ಡಾಚ್ಯಾ ಝಾಡಾಕ್ ತಿಯಾ ಬೆರಾ ಸಮೆತ್ ಉಪ್ಸುನ್, ಸಮುಂದರಾತ್ ಜಾವ್ನ್ ಇಬೆ ರ್‍ಹಾ, ಮಟ್ಲ್ಯಾರ್ ತೆ ಜಾವ್ನ್ ಇಬೆ ರ್‍ಹಾತಾ”, ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:6
13 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ. ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.


ಯೇಸು ಅವನಿಗೆ, “‘ನಿನ್ನ ಕೈಯಲ್ಲಿ ಆಗುವ ಹಾಗಿದ್ದರೆ ಅನ್ನುತ್ತೀಯೋ’? ನಂಬುವವನಿಗೆ ಎಲ್ಲವೂ ಸಾಧ್ಯ!” ಎಂದು ಹೇಳಿದನು.


ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.


ನನಗೆ ಪ್ರವಾದನ ವರವಿದ್ದರೂ, ಎಲ್ಲಾ ರಹಸ್ಯಗಳೂ, ಸಕಲ ವಿಧವಾದ ವಿದ್ಯೆಗಳನ್ನು ತಿಳಿದ್ದರೂ, ಬೆಟ್ಟಗಳನ್ನೂ ತೆಗೆದಿಡುವುಷ್ಟು ನಂಬಿಕೆಯಿದ್ದರೂ, ಪ್ರೀತಿಯಿಲ್ಲದವನಾಗಿದ್ದರೆ ನಾನು ಏನೂ ಅಲ್ಲದವನಾಗಿದ್ದೇನೆ.


ಆದಕಾರಣ ಆತನನ್ನು ನೋಡುವುದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.


ಅದು ಸಾಸಿವೆ ಕಾಳಿನಂತಿರುತ್ತದೆ. ನೆಲದಲ್ಲಿ ಬಿತ್ತುವಾಗ ಅದು ಭೂಮಿಯಲ್ಲಿರುವ ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದೆ.


ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.


“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?


ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು