ಲೂಕ 17:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮಲ್ಲಿ ಯಾವನಿಗಾದರೂ ಉಳುವ ಅಥವಾ ಕುರಿಮೇಯಿಸುವ ಆಳಿರಲಾಗಿ ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ - ನೀನು ತಟ್ಟನೆ ಬಂದು ಊಟಕ್ಕೆ ಕೂತುಕೋ ಎಂದು ಹೇಳಾನೇ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನಿಮ್ಮಲ್ಲಿ ಒಬ್ಬನಿಗೆ ಹೊಲದಲ್ಲಿ ಕೆಲಸ ಮಾಡುವಂಥ ಒಬ್ಬ ಸೇವಕನಿದ್ದಾನೆಂದು ಭಾವಿಸಿಕೊಳ್ಳೋಣ. ಆ ಸೇವಕನು ಭೂಮಿಯನ್ನು ಉಳುತ್ತಿರುತ್ತಾನೆ ಅಥವಾ ಕುರಿಗಳನ್ನು ಮೇಯಿಸುತ್ತಿರುತ್ತಾನೆ. ಆ ಸೇವಕನು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದಾಗ ನೀನು ಅವನಿಗೆ ಏನು ಹೇಳುವೆ? ‘ಒಳಗೆ ಬಾ! ಊಟಕ್ಕೆ ಕುಳಿತುಕೊ’ ಎಂದು ಹೇಳುವಿಯೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 “ತುಮ್ಚೊ ಎಕ್ ಆಳ್ ಮನುನ್ ಚಿಂತುವಾ, ಅನಿ ತೊ ಶೆತಾತ್ ನಾಂಗ್ರುಕ್ ನಾಹೊಲ್ಯಾರ್, ಬಕ್ರ್ಯಾಕ್ನಿ ರಾಕುಕ್ ಜಾತಾ, ತೊ ಶೆತಾಕ್ನಾ ಯೆಲ್ಲ್ಯಾ ತನ್ನಾ ತೆಕಾ ತುಮಿ ಲಗ್ಗುನಾ ಯೆ, ಅನಿ ಜೆವಾನ್ ಕರ್ ಮನ್ತ್ಯಾಶಿ ಕಾಯ್?” ಅಧ್ಯಾಯವನ್ನು ನೋಡಿ |