Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಹಾಗೆ ಹೇಳದೆ, ‘ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು. ಆ ಮೇಲೆ ನೀನು ಊಟಮಾಡು, ಕುಡಿ’ ಎಂದು ಹೇಳುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಹಾಗೆ ಹೇಳದೆ - ನೀನು ನನ್ನ ಊಟಕ್ಕೇನಾದರೂ ಸಿದ್ಧಮಾಡು, ನಾನು ಊಟಮಾಡಿ ಕುಡಿಯುವ ತನಕ ನಡುಕಟ್ಟಿಕೊಂಡು ನನಗೆ ಸೇವೆಮಾಡು; ಆಮೇಲೆ ನೀನು ಊಟಮಾಡಿ ಕುಡಿ ಎಂದು ಹೇಳುವನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಲ್ಲ! ನೀನು ಅವನಿಗೆ, ‘ನನಗೋಸ್ಕರ ಅಡಿಗೆ ಮಾಡು. ಬಳಿಕ ಶುಭ್ರವಾದ ಬಟ್ಟೆಯನ್ನು ಧರಿಸಿಕೊಂಡು ಬಂದು ನನಗೆ ಊಟಬಡಿಸು. ನಾನು ತಿಂದು ಕುಡಿದ ಮೇಲೆ ನೀನು ಊಟಮಾಡು’ ಎಂದು ಹೇಳುವೆಯಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಹಾಗೆ ಹೇಳದೆ, ‘ನೀನು ಊಟ ತಯಾರುಮಾಡಿ, ನೀನೂ ಸಿದ್ಧವಾಗಿ, ನಾನು ತಿಂದು ಕುಡಿಯುವ ತನಕ ನನ್ನ ಸೇವೆಮಾಡು; ಆಮೇಲೆ ನೀನು ಊಟಮಾಡು,’ ಎಂದು ಅವನಿಗೆ ಹೇಳುವಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಕನ್ನಾಚ್ ನಾ! ಹೆಚ್ಯಾ ಬದ್ಲಾಕ್, ತೆಕಾ ತುಮಿ “ಮಾಜೆ ಜೆವಾನ್ ತಯಾರ್ ಕರ್, ತುಜ್ಯಾ ಕಂಬ್ರೆಕ್ ಟಿವಾಲೊ ಭಾಂದುನ್ ಘೆ, ಅನಿ ಮಾಜೆ ಜೆವ್ನ್, ಫಿವ್ನ್ ಹೊಯ್‍ ಪತರ್ ರ್‍ಹಾ,ಅನಿ ಮಾನಾ ತಿಯಾ ಜೆವಾನ್ ಕರ್, ಮನ್ತ್ಯಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 17:8
6 ತಿಳಿವುಗಳ ಹೋಲಿಕೆ  

ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.


ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.


“ನಿಮ್ಮಲ್ಲಿ ಯಾವನಿಗಾದರೂ ವ್ಯವಸಾಯ ಮಾಡುವ ಅಥವಾ ಕುರಿಮೇಯಿಸುವ ಆಳಿರಲಾಗಿ, ಅವನು ಹೊಲದಿಂದ ಮನೆಗೆ ಬಂದ ಆ ಆಳಿಗೆ, ‘ನೀನು ತಟ್ಟನೆ ಬಂದು ಊಟಕ್ಕೆ ಕುಳಿತುಕೋ’ ಎಂದು ಹೇಳುವನೇ?


ತನ್ನ ಅಪ್ಪಣೆಯಂತೆ ನಡೆದ ಆ ಆಳಿಗೆ, ನಿನ್ನಿಂದ ಉಪಕಾರವಾಯಿತೆಂದು ಅವನಿಗೆ ಹೇಳುವನೇ? ಇದರಂತೆಯೇ ನಿಮ್ಮ ಸಂಗತಿ.


ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು