ಲೂಕ 18:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಫರಿಸಾಯನು ಸುಂಕವಸೂಲಿಗಾರನನ್ನು ಕಂಡು ದೂರದಲ್ಲಿ ನಿಂತುಕೊಂಡು ಹೀಗೆ ಪ್ರಾರ್ಥಿಸಿದನು: ‘ದೇವರೇ, ನಾನು ಬೇರೆಯವರಂತೆ ಸುಲಿಗೆಗಾರನಲ್ಲ, ಮೋಸಗಾರನಲ್ಲ, ಅಥವಾ ವ್ಯಭಿಚಾರಿಯಲ್ಲ. ನಾನು ಈ ಸುಂಕವಸೂಲಿಗಾರನಂತೆಯೂ ಅಲ್ಲ. ಇದಕ್ಕಾಗಿ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಫಾರಿಜೆವ್ ಅಪ್ನಾಚ್ಯಾ ಎವ್ಡ್ಯಾಕ್ ಧುರುಚ್ ಇಬೆ ರ್‍ಹಾಲೊ, ಅನಿ ದೆವಾ ಮಿಯಾ ತುಕಾ ಧನ್ಯವಾದ್ ದಿತಾ. ಮಿಯಾ ಸಗ್ಳ್ಯಾಂಚ್ಯಾ ಸರ್ಕೊ, ಅಸ್‍ಬುರ್ಕೊ, ಸಾಂಗಟಲ್ಲೆ ಕರಿನಸಲ್ಲೊ, ನಾ ಹೊಲ್ಯಾರ್, ಎಕ್ ವೆಭಿಚಾರ್ ಕರ್‍ತಲೊ ಮಾನುಸ್ ನ್ಹಯ್. ಮಿಯಾ ತಬಕ್, ತ್ಯಾ ತೆರ್‍ಗಿ ವಸುಲಿ ಕರ್‍ತಲ್ಯಾ ಪಾಪಿ ಮಾನ್ಸಾ ಸಾರ್ಕೊ ನ್ಹಯ್. ಅಧ್ಯಾಯವನ್ನು ನೋಡಿ |