Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು, ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜುನ್, ಮಿಯಾ ತುಮ್ಕಾ ಸಾಂಗ್ತಾ, ತೊ ತೆರ್‍ಗಿ ವಸುಲ್ ಕರ್‍ತಲೊ, ದೆವಾಚ್ಯಾ ನದ್ರೆತ್ ನಿತಿವಂತ್ ಹೊವ್ನ್, ಆಶಿರ್ವಾದ್ ಘೆವ್ನ್ ಗೆಲೊ. ತ್ಯಾ ಫಾರಿಜೆವಾಚಿ ಮಾಗ್ನಿ, ದೆವಾಕ್ ಮಾನುಕ್ ನಾ. ಜೆ ಕೊನ್ ಅಪ್ನಾಕುಚ್ ವರ್‍ತಿ ಕರ್‍ತ್ಯಾತ್, ತೆಂಕಾ ಖಾಲ್ತಿ ಕರುನ್ ಹೊತಾ, ಅನಿ ಜೆ ಕೊನ್ ಅಪ್ನಾಕುಚ್ ಖಾಲ್ತಿ ಕರ್‍ತ್ಯಾತ್, ತೆಂಕಾ ವರ್‍ತಿ ಕರುನ್ ಹೊತಾ, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:14
39 ತಿಳಿವುಗಳ ಹೋಲಿಕೆ  

ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗ ಆತನು ನಿಮ್ಮನ್ನು ಮೇಲಕ್ಕೆತ್ತುವನು.


ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.


ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ತರುವುದು, ದೀನಮನಸ್ಸುಳ್ಳವನು ಮಾನವನ್ನು ಪಡೆಯುವನು.


ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.


ಪ್ರಭುಗಳನ್ನು ಸಿಂಹಾಸನಗಳಿಂದ ಕೆಳಗೆ ದೊಬ್ಬಿ, ದೀನಸ್ಥಿತಿಯವರನ್ನು ಉನ್ನತಸ್ಥಿತಿಗೆ ತಂದಿದ್ದಾನೆ.


ಯೆಹೋವನು ಮಹೋನ್ನತನು; ಆದರೂ ದೀನರನ್ನು ಲಕ್ಷಿಸುತ್ತಾನೆ; ಗರ್ವಿಷ್ಠರನ್ನು ದೂರದಿಂದಲೇ ಗುರುತು ಹಿಡಿಯುತ್ತಾನೆ.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಯಾರು ಧರ್ಮವನ್ನು ತಿರಸ್ಕರಿಸುವರೋ ಅವರನ್ನು ಆತನು ತಿರಸ್ಕರಿಸುವನು. ದೀನರಿಗಾದರೋ ತನ್ನ ಕೃಪೆಯನ್ನು ಅನುಗ್ರಹಿಸುವನು.


ಮನುಷ್ಯನು ದೇವರ ಎಣಿಕೆಯಲ್ಲಿ ನೀತಿವಂತನಾಗಿರುವುದು ಹೇಗೆ? ಮಾನವನಾಗಿ ಹುಟ್ಟಿದವನು ಪರಿಶುದ್ಧನಾಗಿರುವುದು ಸಾಧ್ಯವೋ?


ಯಾವನಾದರೂ ಯೇಸು ಕ್ರಿಸ್ತನ ಮೇಲೆ ನಂಬಿಕೆ ಇಡುವುದರಿಂದಲೇ ಹೊರತು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸುವುದರಿಂದ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲವೆಂಬುದು ನಮಗೆ ತಿಳಿದಿರುವುದರಿಂದ ನಾವು ಸಹ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಬಿಟ್ಟು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟೆವು. ಏಕೆಂದರೆ ಯಾರೂ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನನುಸರಿಸಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ.


ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಪಾಪಾತ್ಮರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವುದು.


ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,


ಭಂಗಕ್ಕೆ ಮೊದಲು ಗರ್ವದ ಹೃದಯ, ಮಾನಕ್ಕೆ ಮುಂಚೆ ದೀನತೆ.


ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.


ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.


ಹನ್ನಳು ಏಲಿಗೆ, “ನಿನ್ನ ದಾಸಿಯ ಮೇಲೆ ಕಟಾಕ್ಷವಿರಲಿ” ಎಂದು ಹೇಳಿ ಹೊರಟುಹೋಗಿ ಊಟಮಾಡಿದಳು. ಆ ಮೇಲೆ ಆಕೆಯ ಮುಖದಲ್ಲಿ ದುಃಖವು ಕಾಣಲಿಲ್ಲ.


ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.


ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.


ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು” ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.


ಇಗೋ, ದುಷ್ಟನ ಅಂತರಾತ್ಮವು ತನ್ನ ಕ್ರಿಯೆಗಳಿಂದ ಉಬ್ಬಿಹೋಗಿದೆ, ಆದರೆ, ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು