Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರತರಿಸಿ - ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಯೇಸುವು ಚಿಕ್ಕಮಕ್ಕಳನ್ನು ತನ್ನ ಬಳಿಗೆ ಕರೆದು ತನ್ನ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಈ ಚಿಕ್ಕಮಕ್ಕಳಂತಿರುವ ಜನರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಜೆಜುನ್, ಪೊರಾಕ್ನಿ ಅಪ್ನಾಕ್ಡೆ ಬಲ್ವುಲ್ಯಾನ್, ಅನಿ, ಪೊರಾಕ್ನಿ ಮಾಜೆಕ್ಡೆ ಯೆವ್ಕ್ ಸೊಡಾ, ತೆಂಕಾ ಅಡ್ವುನಕಾಶಿ, ಕಶ್ಯಾಕ್ ಮಟ್ಲ್ಯಾರ್, ದೆವಾಚೆ ರಾಜ್ ಅಸ್ಲ್ಯಾಕ್ನಿಚ್ ಸಮಂದ್ ಪಡಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:16
14 ತಿಳಿವುಗಳ ಹೋಲಿಕೆ  

ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ಯಾಕೆಂದರೆ ಕ್ರಿಸ್ತ ನಂಬಿಕೆಯಿಲ್ಲದ ಗಂಡನು ತನ್ನ ಹೆಂಡತಿಯ ನಿಮಿತ್ತ ಪವಿತ್ರನಾದನು ಮತ್ತು ಕ್ರಿಸ್ತ ನಂಬಿಕೆಯಿಲ್ಲದ ಹೆಂಡತಿಯು ತನ್ನ ಗಂಡನ ನಿಮಿತ್ತ ಪವಿತ್ರಳಾದಳು. ಹಾಗಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ಪವಿತ್ರರೇ ಆಗಿದ್ದಾರೆ.


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.


ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿದನು.


ಹೆಂಗಸರು, ಮಕ್ಕಳು, ನಿಮ್ಮ ಪಾಳೆಯದಲ್ಲಿರುವ ಅನ್ಯರಾದ ಕಟ್ಟಿಗೆ ಒಡೆಯುವವರು ಮತ್ತು ನೀರು ಸೇದುವವರು ಮುಂತಾದ ಆಳುಗಳು,


ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.


ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.


ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು