Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ದುಃಖಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಈ ಮಾತುಗಳನ್ನು ಕೇಳಿದ್ದೇ ಅವನಿಗೆ ತುಂಬ ವ್ಯಥೆಯಾಯಿತು. ಏಕೆಂದರೆ, ಅವನು ಬಹಳ ಸಿರಿವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನು ಬಹಳ ಐಶ್ವರ್ಯವಂತನಾಗಿದ್ದದರಿಂದ ಇದನ್ನು ಕೇಳಿ ಬಹಳ ವ್ಯಸನಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೇಸುವಿನ ಈ ಮಾತುಗಳನ್ನು ಕೇಳಿದಾಗ ಅವನಿಗೆ ಬಹಳ ದುಃಖವಾಯಿತು. ಏಕೆಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಹೆ ಆಯ್ಕಲ್ಲ್ಯಾ ತನ್ನಾ ತ್ಯಾ ಮಾನ್ಸಾಕ್, ಲೈ ಬೆಜಾರ್ ಹೊಲೊ. ಕಶ್ಯಾಕ್ ಮಟ್ಲ್ಯಾರ್, ತೊ ಲೈ ಸಾವ್ಕಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:23
15 ತಿಳಿವುಗಳ ಹೋಲಿಕೆ  

ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.


“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.


ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.


ಇನ್ನು ಕೆಲವರು ವಾಕ್ಯವನ್ನು ಕೇಳಿದ ಮೇಲೆ ಬರಬರುತ್ತಾ ಈ ಜೀವನದಲ್ಲಿ ಆಗುವ ಚಿಂತೆ, ಐಶ್ವರ್ಯ ಭೋಗಗಳಿಂದ ಅಡಗಿಸಲ್ಪಟ್ಟು ಫಲವನ್ನು ಕೊಡಲಾರದವರು, ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು.


ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತಿಗೆ ವ್ಯಸನಗೊಂಡು ದುಃಖದಿಂದ ಹೊರಟುಹೋದನು.


ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.


ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.


ಇಷ್ಟೇ ಅಲ್ಲದೆ, ನನ್ನ ಕರ್ತನಾದ ಕ್ರಿಸ್ತಯೇಸುವನ್ನರಿಯುವುದೇ ಅತಿ ಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿಮಿತ್ತ ನಾನು ಎಲ್ಲವನ್ನೂ ಕಳೆದುಕೊಂಡು ಅವುಗಳನ್ನು ಕಸವೆಂದೆಣಿಸುತ್ತೇನೆ.


ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆಗ ಯೇಸು ಅವನನ್ನು ನೋಡಿ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು