Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಪ್ನಿ ಬರೆ, ಅನಿ ಹುರಲ್ಲಿ ಸಗ್ಳಿ ಲೊಕಾ ವಾಯ್ಟ್ ಮನುನ್ ಯವ್ಜುನ್ಗೆತ್ ರ್‍ಹಾತಲ್ಯಾ ಲೊಕಾಕ್ನಿ ಜೆಜುನ್, ಹಿ, ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:9
22 ತಿಳಿವುಗಳ ಹೋಲಿಕೆ  

ಆಗ ಆತನು ಅವರಿಗೆ ಹೇಳಿದ್ದೇನಂದರೆ, “ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು, ಆದರೆ ದೇವರು ನಿಮ್ಮ ಹೃದಯಗಳನ್ನು ಬಲ್ಲವನಾಗಿದ್ದಾನೆ. ಮನುಷ್ಯರ ದೃಷ್ಟಿಯಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು, ಎಣಿಸಿಕೊಳ್ಳುವ ಬೇರೊಂದು ತರದವರು ಉಂಟು.


ಅವರು, ‘ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ’ ಎನ್ನುತ್ತಾ, ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ, ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವುದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವುದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕು.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.


ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅದಕ್ಕೆ ಅವರು ಅವನನ್ನು ನಿಂದಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.


ಅದಕ್ಕೆ ಯೆಹೂದ್ಯರು, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೋ?” ಎಂದು ಕೇಳಿದರು.


ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, “ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವುದು.


ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ?


ಏಳನೆಯ ದಿನದಲ್ಲಿ ಯಾಜಕನು ಪರೀಕ್ಷಿಸುವಾಗ ಆ ಗಾಯ ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಭಾಗದಲ್ಲಿ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಉಳಿದ ಚರ್ಮಕ್ಕಿಂತ ಆಳವಾಗಿ ಕಾಣದೆಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು