Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮನುಷ್ಯಕುಮಾರನು ಬಂದದ್ದು ತಪ್ಪಿಹೋದ ಜನರನ್ನು ಹುಡುಕಿ ರಕ್ಷಿಸುವುದಕ್ಕಾಗಿಯಷ್ಟೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಕಶ್ಯಾಕ್ ಮಟ್ಲ್ಯಾರ್, ಮಾನ್ಸಾಚೊ ಲೆಕ್ ಕಳ್ದುನ್ ಗೆಲ್ಲ್ಯಾಕ್ನಿ ಹುಡ್ಕುಕ್, ಅನಿ ಬಚಾವ್ ಕರುಕ್ ಮನುನ್ ಯೆಲಾ, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:10
17 ತಿಳಿವುಗಳ ಹೋಲಿಕೆ  

“ತಪ್ಪಿಸಿಕೊಂಡದ್ದನ್ನು ಹುಡುಕುವೆನು, ಓಡಿಸಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದದ್ದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿದ ಕುರಿಗಳನ್ನು ಸಂಹರಿಸುವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”


ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು.


ನಾವು ಬಲಹೀನರಾಗಿದ್ದಾಗಲೇ ಕ್ರಿಸ್ತನು ನಿಯಮಿತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.


ಆದರೆ ಯೇಸು ಹೇಳಿದ್ದೇನೆಂದರೆ “ಕಳೆದುಹೋದ ಕುರಿಗಳಂತಿರುವ ಇಸ್ರಾಯೇಲ್ ಮನೆತನದವರ ಬಳಿಗೇ ಹೊರತು ಮತ್ತಾರ ಬಳಿಗೂ ನಾನು ಕಳುಹಿಸಲ್ಪಟ್ಟವನಲ್ಲ” ಅಂದನು.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.


ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.


ಮನುಷ್ಯಕುಮಾರನು ಕೆಟ್ಟು ಹೋಗಿರುವುದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


“ಇಲ್ಲವೇ ಒಬ್ಬ ಹೆಂಗಸಿನ ಬಳಿಯಲ್ಲಿ ಹತ್ತು ಬೆಳ್ಳಿನಾಣ್ಯಗಳಿರಲಾಗಿ ಒಂದು ಬೆಳ್ಳಿನಾಣ್ಯ ಕಳೆದು ಹೋದರೆ ದೀಪಹಚ್ಚಿ, ಮನೆಯನ್ನು ಗುಡಿಸಿ ಸಿಕ್ಕುವ ತನಕ ಅದನ್ನು ಎಚ್ಚರದಿಂದ ಹುಡುಕದೆ ಇದ್ದಾಳೂ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು