ಲೂಕ 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅರಸನು ಆ ಸೇವಕನಿಗೆ, ‘ಭಲೇ! ನೀನು ಒಳ್ಳೆಯ ಆಳು. ಚಿಕ್ಕವಿಷಯಗಳಲ್ಲಿ ನಾನು ನಿನ್ನ ಮೇಲೆ ಭರವಸೆ ಇಡಬಹುದೆಂದು ನನಗೆ ತಿಳಿಯಿತು. ಆದ್ದರಿಂದ ನನ್ನ ಹತ್ತು ಪಟ್ಟಣಗಳನ್ನು ಆಳುವುದಕ್ಕೆ ನಿನ್ನನ್ನು ನೇಮಿಸುವೆನು!’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ತನ್ನಾ ಧನಿಯಾನ್ ತೆಕಾ “ಶಬಾಶ್! ತಿಯಾ ಮಾಜೊ ಎಕ್ ಬರೊ ಆಳ್! ಅಜುನ್ ಸಗೊಳ್ ತಿಯಾ ಮಾಕಾ ವಿಶ್ವಾಸಾನ್ ಹಾಸ್, ತಸೆ ಮನುನ್ ಮಿಯಾ ತುಕಾ ಧಾ ಶಾರಾಂಚ್ಯಾ ವರ್‍ತಿ ಅದಿಕಾರ್ ದಿತಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |