ಲೂಕ 19:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 “ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಸಮಾಧಾನ, ಮೇಲಣಲೋಕಗಳಲ್ಲಿ ಮಹಿಮೆ” ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವುದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 “ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಅವರು, “‘ಪ್ರಭುವಿನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದವಾಗಲಿ!’ ಪರಲೋಕದಲ್ಲಿ ಸಮಾಧಾನವಾಗಲಿ; ದೇವರಿಗೆ ಮಹಿಮೆಯಾಗಲಿ” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಸಗ್ಳಿ ಲೊಕಾ , ಸರ್ವೆಸ್ವರಾಚ್ಯಾ ನಾವಾನ್ ಯೆತಲ್ಯಾ ರಾಜಾಕ್ ದೆವ್ ಆಶಿರ್ವಾದ್ ದಿಂವ್ದಿ! ಸರ್‍ಗಾ ವರ್‍ತಿ ಶಾಂತಿ, ಅನಿ ದೆವಾಕ್ ಮಹಿಮಾ ಹೊಂವ್ದಿ! ಮನುಕ್‍ಲಾಲಿ. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.