Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 “ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 “ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಜೆರುಸಲೇಮಿಗೆ, “ನಿನಗೆ ಯಾವುದರಿಂದ ಸಮಾಧಾನವಾಗುತ್ತದೆ ಎಂಬುದನ್ನು ನೀನು ಇಂದೇ ತಿಳಿದುಕೊಂಡಿದ್ದರೆ ಎಷ್ಟೋ ಒಳ್ಳೆಯದಾಗಿತ್ತು! ಆದರೆ ನೀನು ಅದನ್ನು ತಿಳಿಯಲಾರೆ, ಏಕೆಂದರೆ ಅದು ನಿನಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

42 “ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಅಶೆ ಮನುಕ್‍ಲಾಲೊ ಆಜ್ ತಿಯಾ ತರ್ಬಿ ಸಮಾದಾನ್ ಪಾಜೆ ಮನುನ್ ಕಳ್ವುನ್ ಘೆಟಲ್ಲೆ ರ್‍ಹಾಲ್ಯಾರ್, ಕವ್ಡೆ ಬರೆ ಹೊಯ್ ಹೊತ್ತೆ! ಖರೆ ಅತ್ತಾ ತೆ ತುಕಾ ದಿಸಿನಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:42
35 ತಿಳಿವುಗಳ ಹೋಲಿಕೆ  

ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!


“ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”


ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು! ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ನಿಮ್ಮಲ್ಲಿ ಒಬ್ಬರಾದರೂ ಪಾಪದಲ್ಲಿ ಸಿಕ್ಕಿ ಮೋಸಹೋಗಿ ಕಠಿಣರಾಗದಂತೆ, ‘ಇಂದು’ ಎಂದು ಕರೆಯಲ್ಪಡುವ ಅವಕಾಶ ಇನ್ನೂ ಇರುವಾಗಲೇ, ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಸ್ವಲ್ಪವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟುಬಿಡಲಿ; ಇಸ್ರಾಯೇಲಿನ ಮನೆತನದವರೇ ನೀವು ಏಕೆ ಸಾಯಬೇಕು?’” ಇದು ಕರ್ತನಾದ ಯೆಹೋವನ ನುಡಿ.


ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ.


ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,


ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!


ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.


ತರುವಾಯ ಆತನು ಯೆರೂಸಲೇಮ್ ಪಟ್ಟಣದ ಸಮೀಪಕ್ಕೆ ಬಂದಾಗ ಆ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಕಣ್ಣೀರಿಡುತ್ತಾ,


ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು