Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಬರೆಯಲ್ಪಟ್ಟಿದೆಯಲ್ಲಾ, ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ” ಎಂದು ಹೇಳಿ ಅವರನ್ನು ಹೊರಗೆ ಅಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 “ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ನನ್ನ ಆಲಯವು ಪ್ರಾರ್ಥನಾಲಯವಾಗಿರುವದು ಎಂದು ಬರೆದದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಅವರಿಗೆ, “‘ನನ್ನ ಆಲಯವು ಪ್ರಾರ್ಥನಾಲಯವಾಗಿರುವುದು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದರೆ ನೀವು ಅದನ್ನು ‘ಕಳ್ಳರ ಗವಿಯನ್ನಾಗಿ ಮಾರ್ಪಡಿಸಿದ್ದೀರಿ’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ನೀವೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ತೆನಿ ತೆಂಕಾ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ದೆವ್ ಮನ್ತಾ “ಮಾಜಿ ದೆವಾಚಿ ಗುಡಿ ಎಕ್ ಮಾಗ್ನಿ ಕರ್‍ತಲೆ ಘರ್ ಹೊತಾ; ಖರೆ ತುಮಿ ತೆ, ಚೊರಾನಿ ನಿಪ್ತಲೊ ಜಾಗೊ ಕರುನ್ ಥವ್ಲ್ಯಾಶಿ!” ಮನುನ್. ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:46
8 ತಿಳಿವುಗಳ ಹೋಲಿಕೆ  

ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ನನ್ನ ಹೆಸರುಗೊಂಡಿರುವ ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕಳ್ಳರ ಗವಿಯಾಯಿತೋ? ಆಹಾ, ನಾನೇ, ನಾನೇ ಇದನ್ನೆಲ್ಲಾ ನೋಡಿದ್ದೇನೆ” ಎಂಬುದು ಯೆಹೋವನಾದ ನನ್ನ ನುಡಿ.


“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


“ಇದೇ ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಮತ್ತು ಅದರ ಸುತ್ತುಮುತ್ತಲಿನ ಪ್ರದೇಶವೆಲ್ಲಾ ಅತಿ ಪರಿಶುದ್ಧವಾಗಿರಬೇಕು. ಇಗೋ, ಆ ಆಲಯದ ನಿಯಮವು ಇದೇ.


ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.


ಕಾನಾನು! ಅದರ ಕೈಯಲ್ಲಿ ಮೋಸದ ತ್ರಾಸು ಇದೆ; ಕಸಕೊಳ್ಳಬೇಕೆಂಬದೇ ಅದರ ಆಶೆ.


ಆತನು ಅವರಿಗೆ, “‘ನನ್ನ ಮನೆಯು ಪ್ರಾರ್ಥನಾಲಯವಾಗಿದೆ’ ಎಂದು ಬರೆದಿದೆ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡುತ್ತಿದ್ದೀರಿ” ಎಂದು ಹೇಳಿದನು.


ಮತ್ತು ಆತನು ಉಪದೇಶಮಾಡಿ, “‘ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವೆನಿಸಿಕೊಳ್ಳುವುದು’ ಎಂದು ಬರೆದಿದೆಯಲ್ಲಾ? ಆದರೆ ‘ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ’” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು