Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಆದರೆ ಜನರೆಲ್ಲರು ಆತನ ಹತ್ತಿರದಲ್ಲಿದ್ದುಕೊಂಡು ಬೋಧನೆಯನ್ನು ಗಮನಿಸಿ ಕೇಳುತ್ತಿದ್ದುದರಿಂದ ಏನು ಮಾಡಬೇಕೆಂದು ಅವರಿಗೆ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಆದರೆ ಜನರೆಲ್ಲರೂ ಯೇಸುವಿನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಯೇಸು ಹೇಳಿದ ವಿಷಯಗಳಲ್ಲಿ ಅವರು ಬಹಳ ಆಸಕ್ತರಾಗಿದ್ದರು. ಆದ್ದರಿಂದ ಮಹಾಯಾಜಕರಿಗೆ, ಧರ್ಮೋಪದೇಶಕರಿಗೆ ಮತ್ತು ಜನನಾಯಕರಿಗೆ ಯೇಸುವನ್ನು ಹೇಗೆ ಕೊಲ್ಲಬೇಕೆಂದೇ ತಿಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

48 ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

48 ಖರೆ ತೆಂಕಾ ಜೆಜುಕ್ ಜಿವಾನಿ ಮಾರ್‍ತಲಿ ವಾಟ್ ಗಾವುಕುಚ್‍ನಾ, ಕಶ್ಯಾಕ್ ಮಟ್ಲ್ಯಾರ್,ಲೊಕಾ ಎಕ್ ಶಬದ್ ಸೈತ್ ಚುಕಿನಸ್ತಾನಾ, ಬರೆ ಕರುನ್ ಜೆಜು ಸಾಂಗ್ತಲೆ ಆಯ್ಕುಲಾಗಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:48
8 ತಿಳಿವುಗಳ ಹೋಲಿಕೆ  

ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.


ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.


ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.


ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು