Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜಕ್ಕಾಯನು ಪ್ರಭುವಿಗೆ (ಯೇಸುವಿಗೆ), “ನಾನು ಜನರಿಗೆ ಉಪಕಾರ ಮಾಡಬೇಕೆಂದಿದ್ದೇನೆ. ನಾನು ನನ್ನ ಹಣದಲ್ಲಿ ಅರ್ಧವನ್ನು ಬಡವರಿಗೆ ಕೊಡುವೆನು. ನಾನು ಯಾರಿಗಾದರೂ ಮೋಸಮಾಡಿದ್ದರೆ, ಆ ವ್ಯಕ್ತಿಗೆ ಅದರ ನಾಲ್ಕರಷ್ಟು ಹೆಚ್ಚಾಗಿ ಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಜಾಕ್ಕೆವ್ಸ್ ಉಟುನ್ ಇಬೆ ರ್‍ಹಾಲೊ, ಅನಿ ಧನಿಯಾಕ್ “ಗುರುಜಿ ಆಯ್ಕಾ! ಮಾಜೆ ಮನುನ್ ಹೊತ್ತ್ಯಾತ್ಲೆ ಅರ್ದ್ಯಾಕ್ ಅರ್‍ದೆ, ಮಿಯಾ ಗರಿಬಾಕ್ನಿ ದಿತಾ, ಅನಿ ಕೊನಾಕ್-ಕೊನಾಕ್ ಮಿಯಾ ಪಸ್ವುಲಾ,ತೆಂಕಾ ತೆಚ್ಯಾ ಚಾರ್ ಪಟ್ ಪರ್ತುನ್ ದಿತಾ”, ಮಟ್ಲ್ಯಾನ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:8
22 ತಿಳಿವುಗಳ ಹೋಲಿಕೆ  

ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಬೇಕು” ಎಂದನು.


ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.


ಅವನ ತಪ್ಪು ಬಯಲಾದರೆ ಅವನು ಏಳರಷ್ಟು ಕೊಡಬೇಕಾಗುವುದು, ಅಥವಾ ತನ್ನ ಮನೆಯ ಆಸ್ತಿಯನ್ನೆಲ್ಲಾ ಕೊಟ್ಟು ತೀರಿಸಲೇಬೇಕು.


ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.


“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ, ಪೀಡಿಸಿದ್ದೂ, ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ” ಅಂದನು.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,


ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಆ ದುಷ್ಟನು ತನ್ನ ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಅನ್ಯಾಯವನ್ನು ಮಾಡದೆ, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರನಾದರೆ ಸಾಯುವುದಿಲ್ಲ. ಖಂಡಿತವಾಗಿ ಬದುಕುವನು.


ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವನು ನೀನೋ ಅಥವಾ ನಾವು ಬೇರೊಬ್ಬನಿಗಾಗಿ ಕಾಯಬೇಕೋ?” ಎಂದು ಕರ್ತನನ್ನು ಕೇಳಲು ಹೇಳಿಕಳುಹಿಸಿದನು.


ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು