Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆ ಕಾಲದಲ್ಲಿ ಚಕ್ರವರ್ತಿ ಅಗಸ್ಟಸ್ ಸೀಸರನು ರೋಮನ್ನರ ಆಳ್ವಿಕೆಗೆ ಒಳಪಟ್ಟಿದ್ದ ಎಲ್ಲಾ ದೇಶಗಳಲ್ಲಿ ಜನಗಣತಿ ಆಗಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಗಸ್ತುಸ್ ಕೈಸರಾಚ್ಯಾ ಕಾಲಾತ್ ಸಗ್ಳ್ಯಾ ರೊಮಾಚ್ಯಾ ರಾಜಾಚ್ಯಾ ಲೊಕಾಂಚಿ ಮೆಜ್ನಿ ಕರುಚಿ ಮನುನ್ ಹುಕುಮ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:1
13 ತಿಳಿವುಗಳ ಹೋಲಿಕೆ  

ಚಕ್ರವರ್ತಿಯಾದ ತಿಬೇರಿಯನು ಆಳ್ವಿಕೆಗೆ ಬಂದ ಹದಿನೈದನೆಯ ವರ್ಷದಲ್ಲಿ, ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ, ಹೆರೋದನು ಗಲಿಲಾಯಕ್ಕೆ ಉಪರಾಜನೂ, ಅವನ ತಮ್ಮನಾದ ಫಿಲಿಪ್ಪನು ಇತುರಾಯ ತ್ರಕೋನೀತಿ ಸೀಮೆಗಳಿಗೆ ಉಪರಾಜನೂ, ಲುಸನ್ಯನು ಅಬಿಲೇನೆಗೆ ಉಪರಾಜನೂ ಆಗಿರುವಲ್ಲಿ


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಅದಕ್ಕೆ ಪೌಲನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುವ ತನಕ, ತನ್ನನ್ನು ಕಾಯಬೇಕೆಂದು ಕೇಳಿಕೊಂಡಾಗ ನಾನು ಕೈಸರನ ಬಳಿಗೆ ಕಳುಹಿಸುವ ತನಕ, ಅವನನ್ನು ಕಾಯುವುದಕ್ಕೆ ಅಪ್ಪಣೆಕೊಟ್ಟೆನು ಎಂದು ಹೇಳಿದನು.


ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಮೊದಲು ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಯೇಸು ಕ್ರಿಸ್ತನ ಮೂಲಕ ನನ್ನ ದೇವರಿಗೆ ಸ್ತೋತ್ರ ಮಾಡುತ್ತೇನೆ.


ಅವರಲ್ಲಿ ಅಗಬನೆಂಬ ಒಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವುದು ಎಂದು ಪವಿತ್ರಾತ್ಮನ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯ ಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು.


ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು.


ಆ ಮೇಲೆ ಅವರಿಗೆ, “ನೀವು ಲೋಕದ ಎಲ್ಲಾ ಕಡೆಗಳಿಗೂ ಹೋಗಿ ಸೃಷ್ಟಿಗಳಿಗೆಲ್ಲಾ ಸುವಾರ್ತೆಯನ್ನು ಸಾರಿರಿ.


ಸುವಾರ್ತೆಯು ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವುದೋ ಅಲ್ಲೆಲ್ಲಾ ಈಕೆಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.


ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.


ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.


ಅಹಷ್ವೇರೋಷ್ ರಾಜನು ತನ್ನ ರಾಜ್ಯಕ್ಕೆ ಸೇರಿರುವ ಎಲ್ಲಾ ದೇಶಗಳಿಗೂ ಮತ್ತು ಸಮುದ್ರದ್ವೀಪಗಳಿಗೂ ತೆರಿಗೆಯನ್ನು ವಿಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು