Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಟ್ಟೆಯಲ್ಲಿ ಸುತ್ತಿರುವ ಒಂದು ಮಗು ದನದ ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ನೀವು ಆತನನ್ನು ಗೊತ್ತುಪಡಿಸಿಕೊಳ್ಳಲು ಅದೇ ಗುರುತಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಫಾಳಿಯಾತ್ನಿ ಲಪ್ವುನ್ ಗೊದ್ನಿತ್ ನಿಜ್ವಲ್ಲೊ ಎಕ್ ಪೊರ್ ತುಮ್ಕಾ ಗಾವ್ತಾ. ಹಿ ತುಮ್ಕಾ ಎಕ್ ವಳಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:12
11 ತಿಳಿವುಗಳ ಹೋಲಿಕೆ  

ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


“ನಿನ್ನ ದೇವರಾದ ಯೆಹೋವನಿಂದ ಒಂದು ಗುರುತನ್ನು ಕೇಳು. ಅದು ಪಾತಾಳದಷ್ಟು ಆಳದಲ್ಲಿದ್ದರೂ, ಮೇಲೆ ಎತ್ತರದಲ್ಲಿದ್ದರೂ ಅದನ್ನು ಕೇಳಿಕೋ” ಎಂದು ಹೇಳಿದನು.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಹಿಜ್ಕೀಯನು ಯೆಶಾಯನಿಗೆ, “ಯೆಹೋವನು ನನ್ನನ್ನು ಗುಣಪಡಿಸುವನೆಂಬುವುದಕ್ಕೂ, ನಾನು ಮೂರನೆಯ ದಿನ ಆತನ ಆಲಯಕ್ಕೆ ಹೋಗುವೆನೆಂಬುವುದಕ್ಕೂ, ಇರುವ ಗುರುತು ಏನು?” ಎಂದು ಕೇಳಿದನು.


ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.


ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು