ಲೂಕ 2:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913-14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು: ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಎಗ್ದಮ್, ಸರ್‍ಗಾ ವೈಲ್ಯಾ ದೆವಾಚ್ಯಾ ದುತಾಂಚೊ ತಾಂಡೊ “ದೆವಾಕ್ ಆರಾದನ್” ಕರುಕ್ ಮನುನ್ ಗಿತ್ ಮನ್ತಲೊ ದಿಸ್ಲೊ. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.