Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು “ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ” ಬಲಿಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿಕೊಡಬೇಕಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 “ಎರಡು ಪಾರಿವಾಳಗಳನ್ನು ಅಥವಾ ಎರಡು ಬೆಳವಕ್ಕಿಗಳನ್ನು ಯಜ್ಞವಾಗಿ ಸಮರ್ಪಿಸಬೇಕು” ಎಂದು ಸಹ ಪ್ರಭುವಿನ ಧರ್ಮಶಾಸ್ತ್ರವು ಹೇಳುತ್ತದೆ. ಆದ್ದರಿಂದ ಯೋಸೇಫನು ಮತ್ತು ಮರಿಯಳು ಜೆರುಸಲೇಮಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಚ್ಯಾ ಖಾಯ್ದ್ಯಾಂಚ್ಯಾ ಸರ್ಕೆ, ಎಕ್ ಜೊಡಿ ಪಾರಿವಾಳಾ ನಾ ತರ್ ದೊನ್ ಕೊವ್ಡ್ಯಾಚಿ ಪಿಲ್ಲಾ, ತೆನಿ ದೆವಾಕ್ ಬಲಿ ಕರುನ್ ದಿತಲಿ ಹೊತ್ತಿ, ತೆ ಬಿ ಕರುನ್ ಯವ್ಕ್ ಮನುನ್ ತೆನಿ ಜೆರುಜಲೆಮಾಕ್ ಗೆಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:24
5 ತಿಳಿವುಗಳ ಹೋಲಿಕೆ  

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ಒಬ್ಬ ಸ್ತ್ರೀ ಗಂಡುಮಗುವಿಗೆ ಜನ್ಮ ನೀಡಿದರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುವಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.


“‘ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದ್ದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಅಥವಾ ಪಾರಿವಾಳದ ಮರಿಯಾಗಲಿ ಆಗಿರಬೇಕು.


“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು