Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಕಾಲಾತ್ ಸಿಮಾವ್ ಮನ್ತಲೊ ಎಕ್ ಮಾನುಸ್ ಜೆರುಜಲೆಮಾತ್ ಹೊತ್ತೊ.ತೊ ಎಕ್ ಬರೊ ಅನಿ ದೆವಾಚ್ಯಾ ಭಿಂಯಾನ್ ಚಲ್ತಲೊ ಮಾನುಸ್,ತೊ ಇಸ್ರಾಯೆಲಾಚ್ಯಾ ಸುಟ್ಕಾ ಹೊತಲ್ಯಾ ಎಳಾಕ್ ರಾಕುನ್ಗೆತ್ ಹೊತ್ತೊ. ಪವಿತ್ರ್ ಆತ್ಮೊ ತೆಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:25
22 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಆಕೆ ಅದೇ ಗಳಿಗೆಯಲ್ಲಿ ಅವರ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇಮಿನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತನಾಡುವವಳಾದಳು.


ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬುವನು ಅಲ್ಲಿಗೆ ಬಂದನು. ಅವನು ಯೆಹೂದ್ಯರ ಹಿರೀಸಭೆಯ ಗೌರವಸ್ಥನಾದ ಸದ್ಯಸನೂ, ದೇವರ ರಾಜ್ಯವನ್ನು ಎದುರುನೋಡುತ್ತಿದ್ದವನು ಆಗಿದ್ದನು. ಅವನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು.


ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಕುಣಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮಭರಿತಳಾದಳು.


ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.


“ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ.


ಇದರ ದೆಸೆಯಿಂದ ದೇವರ ಮುಂದೆಯೂ, ಮನುಷ್ಯರ ಮುಂದೆಯೂ ನಿರ್ದೋಷವಾದ ಮನಸ್ಸಾಕ್ಷಿಯುಳ್ಳವನಾಗಿರಬೇಕೆಂದು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ.


ಅವರು; “ಕೊರ್ನೆಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ, ದೇವರಿಗೆ ಭಯಪಡುವವನೂ, ಯೆಹೂದ್ಯ ಜನರೆಲ್ಲರಿಂದ ಒಳ್ಳೆಯ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನಿನ್ನಿಂದ ಸುವಾರ್ತೆಯನ್ನು ಕೇಳಬೇಕೆಂದು ಪರಿಶುದ್ಧ ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದ್ದಾನೆ” ಎಂದು ಹೇಳಿದರು.


ಅವನು ದೈವಭಕ್ತನೂ, ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳುವವನು ಆಗಿದ್ದು, ಜನರಿಗೆ ಬಹಳವಾಗಿ ದಾನಧರ್ಮಮಾಡುತ್ತಾ, ದೇವರಿಗೆ ನಿತ್ಯವೂ ಪ್ರಾರ್ಥನೆಮಾಡುತ್ತಾ ಇದ್ದನು.


ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ನುಡಿದ ಪ್ರವಾದನೆ ಏನೆಂದರೆ,


ಮನುಷ್ಯನೇ, ಒಳ್ಳೆಯದು ಇಂಥದ್ದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಲ್ಲವೇ. ನ್ಯಾಯವನ್ನು ಆಚರಿಸುವುದು, ಕರುಣೆಯಲ್ಲಿ ಆಸಕ್ತನಾಗಿರುವುದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವುದು ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಆಗ ಯೆಹೋವನು, “ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟೆಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ, ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವುದಿಲ್ಲ” ಎಂದು ಸೈತಾನನಿಗೆ ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.


ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.


ನೋಹನ ಚರಿತ್ರೆ: ನೋಹನು ಸತ್ಯವಂತನೂ ಎಲ್ಲಾ ಜನರಲ್ಲಿ ನೀತಿವಂತನು ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ಆಕಾಶದ ಕೆಳಗಿರುವ ಎಲ್ಲಾ ದೇಶಗಳಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು