Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಇತ್ತಲಾಗಿ ಅವರು ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಪ್ರಭುವಿನ ಧರ್ಮಶಾಸ್ತ್ರದ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಯೋಸೇಫ ಮತ್ತು ಮರಿಯಳು ಗಲಿಲಾಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಂತ ಊರಾದ ನಜರೇತಿಗೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ಖಾಯ್ದ್ಯಾತ್ ಸಾಂಗಲ್ಲೆ ಸಾರ್ಕೆ. ಸಗ್ಳೆ ಶಾಸ್ತರ್ ಕರುನ್ ಸರಲ್ಲ್ಯಾ ತನ್ನಾ, ಮರಿ ಅನಿ ಜುಜೆ ಅಪ್ನಾಚ್ಯಾ ಸ್ವಂತ್ ಗಾವಾಕ್ ಗಾಲಿಲಿಯಾತ್ಲ್ಯಾ ನಜರೆತಾಕ್ ಪರ್ತುನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:39
11 ತಿಳಿವುಗಳ ಹೋಲಿಕೆ  

ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.


ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ದೇವರು ಗಬ್ರಿಯೇಲನೆಂಬ ತನ್ನ ದೂತನನ್ನು ಗಲಿಲಾಯ ಸೀಮೆಯ, ನಜರೇತೆಂಬ ಊರಿಗೆ, ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದನು;


ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.


ಅದಕ್ಕೆ ಯೇಸು ಅವರಿಗೆ, “‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ’ ಎಂಬ ಗಾದೆಯನ್ನು ನನಗೆ ನಿಸ್ಸಂದೇಹವಾಗಿ ಹೇಳಿ; ಕಪೆರ್ನೌಮಿನಲ್ಲಿ ನೀನು ಮಾಡಿದ ಕಾರ್ಯಗಳನ್ನು ನಾವು ಕೇಳಿದ್ದೇವೆ, ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿಯೂ ಮಾಡು ಎಂದು ಹೇಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು