Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚೆಸಾಟ್ನಿ ಜುಜೆಬಿ ಗಾಲಿಲಿಯಾಚ್ಯಾ ನಜರೆತ್ ಮನ್ತಲ್ಯಾ ಗಾವಾತ್ನಾ, ದಾವಿದ್ ರಾಜಾಚ್ಯಾ ಉಪಾಜಲ್ಲ್ಯಾ ಗಾವಾಕ್, ಜುದೆಯಾಚ್ಯಾ ಬೆತ್ಲೆಹೆಮಾಕ್ ಗೆಲೊ.ತೊ ದಾವಿದಾಚ್ಯಾ ಘರಾನ್ಯಾಚೊ, ತಸೆ ಮನುನ್ ತೊ ಥೈ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:4
24 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಕುಲದ ಮೂಲವು ಪುರಾತನವೂ ಮತ್ತು ಅನಾದಿಯೂ ಆದದ್ದು.


ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು.


ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.


ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.


ಅಲ್ಲಿರುವ ನಜರೇತೆಂಬ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನು ನಜರೇತಿನವನೆಂದು ಕರೆಯಲ್ಪಡುವನು” ಎಂಬುದಾಗಿ ಪ್ರವಾದಿಗಳು ಹೇಳಿರುವ ಮಾತು ನೆರವೇರಿತು.


ನಿನ್ನ ತಂದೆಯು ನನ್ನನ್ನು ಕುರಿತು ವಿಚಾರ ಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅವನ ಗೋತ್ರದವರು ಅಲ್ಲಿ ವಾರ್ಷಿಕ ಯಜ್ಞಮಾಡುತ್ತಾರೆ’ ಎಂದು ಹೇಳು.


ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು.


ಅದಕ್ಕೆ ಊರ ಬಾಗಿಲಲ್ಲಿ ಕೂಡಿ ಬಂದಿದ್ದ ಹಿರಿಯರೂ, ಎಲ್ಲಾ ಜನರೂ “ಹೌದು, ನಾವೇ ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ. ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಅಭಿವೃದ್ಧಿ ಹೊಂದು, ಬೇತ್ಲೆಹೇಮಿನಲ್ಲಿ ಪ್ರಸಿದ್ಧನಾಗು.


ಆಗ ಬೋವಜನು ಬೇತ್ಲೆಹೇಮಿನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ, “ಯೆಹೋವನು ನಿಮ್ಮ ಸಂಗಡ ಇರಲಿ” ಅಂದನು. ಅವರು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ” ಎಂದು ಹರಸಿದರು.


ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.


ಸೌಲನು ಅವನನ್ನು, “ಹುಡುಗನೇ ನೀನು ಯಾರ ಮಗನು?” ಎಂದು ಕೇಳಿದ್ದಕ್ಕೆ ಅವನು, “ನಾನು ಬೇತ್ಲೆಹೇಮಿನವನೂ ನಿನ್ನ ಸೇವಕನೂ ಆದ ಇಷಯನ ಮಗನು” ಎಂದು ಉತ್ತರಕೊಟ್ಟನು.


ಸೌಲನ ಕಾಲದಲ್ಲಿ ಯೆಹೂದ ಬೇತ್ಲೆಹೇಮ್ ಎಂಬ ಊರಿನ ಎಫ್ರಾತ್ಯನಾದ ಇಷಯನೆಂಬ ಒಬ್ಬ ವೃದ್ಧನಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನು ಒಬ್ಬನು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು


ಹಾಗೆಯೇ ಪ್ರಯಾಣಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇಮಿಗೆ ಬಂದು ಊರೊಳಕ್ಕೆ ಹೋದಾಗ ಅಲ್ಲಿಯ ಜನರಲ್ಲಿ ಕುತೂಹಲ ಮೂಡಿತು. ಸ್ತ್ರೀಯರು, “ಈಕೆಯು ನವೊಮಿಯಲ್ಲವೇ?” ಎಂದು ವಿಚಾರಿಸಲು


ನಾನು ಪದ್ದನ್ ಅರಾಮಿನಿಂದ ಬರುವಾಗ ಕಾನಾನ್ ದೇಶದಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತುಹೋದಳು. ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದನು.


ರಾಹೇಲಳು ಸತ್ತ ಮೇಲೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಯನ್ನು ಸಮಾಧಿಮಾಡಿದರು.


ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ.


ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು