Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆತನ ಮಾತುಗಳನ್ನು ಕೇಳಿ ಆತನ ತಿಳುವಳಿಕೆಗೂ ಆತನ ಬುದ್ಧಿವಂತಿಕೆಯ ಉತ್ತರಗಳಿಗೂ ಅವರೆಲ್ಲರೂ ಆಶ್ಚರ್ಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ತೊ ಉಶಾರ್ಕಿನ್ ಜಬಾಬ್ ದಿತಲೆ ಬಗುನ್, ಆಯ್ಕಲ್ಲೆ ಸಗ್ಳೆಜಾನ್ ಅಜಾಪ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:47
13 ತಿಳಿವುಗಳ ಹೋಲಿಕೆ  

“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.


ನಿನ್ನ ಕಟ್ಟಳೆಗಳು ನನ್ನ ಧ್ಯಾನವಾಗಿರುವುದರಿಂದ, ನನ್ನ ಉಪಾಧ್ಯಾಯರಿಗಿಂತ ಜ್ಞಾನಿಯಾಗಿದ್ದೇನೆ.


ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.


ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.


ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.


ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.


ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?


ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.


ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಈತನಿಗೆ ಈ ಬೋಧನೆಯ ಮಾತುಗಳು ಎಲ್ಲಿಂದ ಬಂದಿತು? ಈತನು ಪಡೆದಿರುವ ಜ್ಞಾನವಾದರೂ ಎಂಥದ್ದು? ಈತನ ಕೈಯಿಂದ ಇಂತಹ ಅದ್ಭುತಕಾರ್ಯಗಳು ಆಗುವುದಾದರು ಹೇಗೆ?


ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು