ಲೂಕ 2:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು, “ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು - ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಯೇಸುವಿನ ತಂದೆತಾಯಿಗಳು ಆತನನ್ನು ಅಲ್ಲಿ ಕಂಡು ಆಶ್ಚರ್ಯಪಟ್ಟರು. ಮರಿಯಳು ಆತನಿಗೆ, “ಮಗನೇ, ನೀನು ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆ ಮತ್ತು ನಾನು ನಿನಗಾಗಿ ಬಹಳ ಚಿಂತಿಸುತ್ತಿದ್ದೆವು. ನಿನಗೋಸ್ಕರ ನಾವು ಹುಡುಕುತ್ತಿದ್ದೆವು” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ತೆಕಾ ಬಗುನ್ ತೆಚೆ ಬಾಯ್ ಬಾಬಾ ಅಜಾಪ್ ಹೊಲ್ಯಾನಿ, ಅನಿ ತೆಚ್ಯಾ ಬಾಯ್ನ್ ತೆಕಾ “ಮಾಜ್ಯಾ ಪೊರಾ, ತಿಯಾ ಅಮ್ಕಾ ಅಶೆ ಕಶ್ಯಾಕ್ ಕರ್‍ಲೆ? ತುಕಾ ಹುಡ್ಕುಕ್, ಮಿಯಾ ಅನಿ ತುಮ್ಚೊ ಬಾಬಾ ಕವ್ಡೊ ತರಾಸ್ ಕರುನ್ ಘೆಟ್ಲಾಂವ್ ಗೊತ್ತ್ ಹಾಯ್?” ಮಟ್ಲಿನ್. ಅಧ್ಯಾಯವನ್ನು ನೋಡಿ |