Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತಿನಿ ಅಪ್ನಾಚ್ಯಾ ಪಯ್ಲೆಚ್ಯಾ ಪೊರಾಕ್ ಜಲಮ್ ದಿಲಿನ್. ತೆಂಕಾ ರ್‍ಹಾವ್ಕ್ ಎಕ್ ಘರಾತ್ ಸೈತ್ ಜಾಗೊ ಗಾವುಕ್‍ನತ್ತೊ. ಮರಿನ್ ಪೊರಾಕ್ ಫಾಳಿಚ್ಯಾ ತುಕ್ಡ್ಯಾತ್ನಿ ಲಪ್ಟುನ್ ಗೊದ್ನಿತ್ ನಿಜ್ವುಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:7
16 ತಿಳಿವುಗಳ ಹೋಲಿಕೆ  

ಆದರೆ ಸೂಕ್ತಸಮಯ ಬಂದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡಿಸಬೇಕೆಂತಲೂ, ಪುತ್ರರ ಬಾಧ್ಯತೆಯ ಪದವಿಯನ್ನು ನಮಗೆ ದೊರಕಿಸಿಕೊಡಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ, ಧರ್ಮಶಾಸ್ತ್ರಾಧೀನನಾಗಿಯೂ ಬಂದನು.


ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.


ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಇವನು ಆ ಬಡಗಿಯ ಮಗನಲ್ಲವೇ? ಇವನ ತಾಯಿ ಮರಿಯಳೆಂಬುವವಳಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಇವರು ಇವನ ತಮ್ಮಂದಿರಲ್ಲವೇ?


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.


ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.


ದಾರಿಯಲ್ಲಿ ಅವರು ಒಂದು ಸ್ಥಳದಲ್ಲಿ ಇಳಿದುಕೊಂಡಾಗ ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದಾಗ ಅದರ ಬಾಯಲ್ಲಿ ತಾನು ತಂದಿದ್ದ ಹಣವನ್ನು ಕಂಡನು.


ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.


ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು.


ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು