Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೊ ಯೆತಾ, ಅನಿ ತ್ಯಾ ಮಾನ್ಸಾಕ್ನಿ ಜಿವಾನಿಚ್ ಮಾರ್‍ತಾ, ಅನಿ ಮಳೊ ದುಸ್ರ್ಯಾಕ್ನಿ ಗುತ್ಕ್ಯಾಕ್ ದಿತಾ. ಹೆ ಆಯ್ಕಲ್ಲ್ಯಾ ತನ್ನಾ ಲೊಕಾ “ನಾ ತಸೆ ಹೊವ್ಕ್ ಸಾದ್ಯ್ ನಾ!” ಮನುಕ್‍ಲಾಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:16
24 ತಿಳಿವುಗಳ ಹೋಲಿಕೆ  

ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ” ಅಂದನು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಅವರು ಆತನಿಗೆ, “ಆ ಕೆಡುಕರನ್ನು ಕ್ರೂರವಾಗಿ ಸಂಹರಿಸಿ ತಕ್ಕಕಾಲಕ್ಕೆ ಹಣ್ಣುಗಳನ್ನು ತನಗೆ ಸಲ್ಲಿಸುವಂಥ ಬೇರೆ ತೋಟಗಾರರಿಗೆ ತನ್ನ ತೋಟವನ್ನು ಗುತ್ತಿಗೆಗೆ ಕೊಡುವನು” ಎಂದು ಹೇಳಿದರು.


ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಫಲಕಾಲ ಹತ್ತಿರವಾದಾಗ ತನಗೆ ಬರಬೇಕಾದ ಹಣ್ಣುಗಳನ್ನು ತೆಗೆದುಕೊಂಡು ಬರುವುದಕ್ಕಾಗಿ ಆ ತೋಟಗಾರರ ಬಳಿಗೆ ತನ್ನ ಆಳುಗಳನ್ನು ಕಳುಹಿಸಲು,


ಹಾಗಾದರೆ ಆ ದ್ರಾಕ್ಷಾ ತೋಟದ ಯಜಮಾನನು ಏನು ಮಾಡುವನು? ಅವನು ಬಂದು ಆ ಗುತ್ತಿಗೆದಾರರನ್ನು ಸಂಹರಿಸಿ ತನ್ನ ದ್ರಾಕ್ಷಾತೋಟವನ್ನು ಬೇರೆಯವರಿಗೆ ಒಪ್ಪಿಸುವನು.


ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?


ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.


ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?


ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.


ಪಾಪದ ಪಾಲಿಗೆ ಸತ್ತವರಾದ ನಾವು ಇನ್ನು ಅದರಲ್ಲೇ ಬದುಕುವುದು ಹೇಗೆ?


ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.


ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.


ಹಾಗಾದರೆ ಒಳ್ಳೆಯದೆ ನನಗೆ ಮರಣಕ್ಕೆ ಕಾರಣವಾಯಿತೋ? ಹಾಗೆ ಎಂದಿಗೂ ಅಲ್ಲ. ಪಾಪವೇ ಮರಣಕ್ಕೆ ಕಾರಣವಾದದ್ದು. ಅದು ಹಿತವಾದದರ ಮೂಲಕ ನನಗೆ ಮರಣವನ್ನು ಉಂಟುಮಾಡಿದ್ದರಿಂದ ಪಾಪವೇ ಎಂದು ಕಾಣಿಸಿಕೊಂಡಿತು. ಮತ್ತು ಆಜ್ಞೆಯ ಮೂಲಕ ಪಾಪವು ಕೇವಲ ಪಾಪಸ್ವರೂಪವೇ ಎಂದು ಸ್ಪಷ್ಟವಾಯಿತು.


ಹಾಗಾದರೆ ಏನು ಹೇಳೋಣ? ದೇವರಲ್ಲಿ ಅನ್ಯಾಯ ಉಂಟೋ? ಎಂದಿಗೂ ಇಲ್ಲ.


ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.


ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು


ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.


ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.


ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು