Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಕರ್ತನನ್ನು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಎಂದು ಹೇಳಿದ್ದಾನೆ. ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯು ಸ್ಪಷ್ಟವಾಗಿ ತೋರಿಸಿದ್ದಾನೆ. ಉರಿಯುವ ಪೊದೆಯ ಕುರಿತು ಮೋಶೆ ಬರೆಯುವಾಗ ‘ಪ್ರಭುವಾದ ದೇವರೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಮೊಯ್ಜೆ ಮರಲ್ಲಿ ಮಾನ್ಸಾ ಪರ್ತುನ್ ಝಿತ್ತಿ ಹೊತ್ಯಾತ್ ಮನುನ್ ಬರಬ್ಬರ್ ದಾಕ್ವುನ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಜಳ್ತಲ್ಯಾ ಝಿಳಿಚ್ಯಾ ವಿಶಯಾತ್ ಬಗ್ತಾನಾ, ಥೈ ದೆವಾಚ್ಯಾ ವಿಶಯಾತ್, ಅಬ್ರಾಹಾಮಾಚೊ ದೆವ್ ಇಸಾಕಾಚೊ ದೆವ್, ಅನಿ ಜಾಕೊಬಾಚೊ ದೆವ್” ಮನುನ್ ಮನ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:37
10 ತಿಳಿವುಗಳ ಹೋಲಿಕೆ  

ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲ ಇವೆಲ್ಲವುಗಳಲ್ಲಿ ಶ್ರೇಷ್ಠವಾದದ್ದೂ ಮತ್ತು (ಹೋರೇಬ್ ಬೆಟ್ಟದಲ್ಲಿನ) ಪೊದೆಯಲ್ಲಿ ವಾಸಿಸಿದಾತನ ದಯೆಯೂ ಯೋಸೇಫ್ ವಂಶದವರ ಪಾಲಿಗೆ ಬರಲಿ; ಅಣ್ಣತಮ್ಮಂದಿರಿಗೆ ಪ್ರಭುವಾಗಿರುವ ಮತ್ತು ಕುಲದವರ ಶಿರಸ್ಸಾಗಿರುವ ಇವನ ಮೇಲೆ ಆಶೀರ್ವಾದ ಉಂಟಾಗಲಿ.


ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.


ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,


ತಿರುಗಿ ನನ್ನನ್ನು ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಬರಮಾಡಿದರೆ ಯೆಹೋವನೇ ನನಗೆ ದೇವರಾಗಿರುವನು.


ಇದಲ್ಲದೆ ಯೆಹೋವನು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆಯಾದ ಅಬ್ರಹಾಮನ ದೇವರೂ, ಇಸಾಕನ ದೇವರೂ ಆಗಿರುವ ಯೆಹೋವನು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.


ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು