Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಗಮನಿಸುತ್ತಿರುವಾಗ, ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಭೊತ್ಯಾನಿ ಬಗಟ್ಲ್ಯಾನ್, ತನ್ನಾ ಸಾವ್ಕಾರ್ ಲೊಕಾ ಅಪ್ನಾಚಿ ಕಾನಿಕ್ ದೆವಾಚ್ಯಾ ಗುಡಿಚ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಘಾಲುಲಾಗಲ್ಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:1
12 ತಿಳಿವುಗಳ ಹೋಲಿಕೆ  

ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.


ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.


ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ನಂತರ ಉಗ್ರಾಣಗಳ ಮೇಲ್ವಿಚಾರಣೆಗಾಗಿ ನೋಡುವುದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಯ ಕುಲದವನಾದ ಪೆದಾಯ ಇವರನ್ನೂ, ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ, ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆನು. ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರಾಗಿದ್ದರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.


ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಎಲ್ಲಾ ಬೆಳ್ಳಿ ಬಂಗಾರವೂ, ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನಿಗೆ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು” ಎಂದನು.


ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಆದರೆ ಬೆಳ್ಳಿಬಂಗಾರವನ್ನೂ, ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ, ಯೆಹೋವನ ಆಲಯದ ಭಂಡಾರಕ್ಕೆ ಒಪ್ಪಿಸಿದರು.


ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.


ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು