Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಕಶ್ಯಾಕ್ ಮಟ್ಲ್ಯಾರ್ ಮಿಯಾ ತುಮ್ಕಾ ,ಶಾನ್‍ಪಾನಾಚ್ಯಾ ಗೊಸ್ಟಿಯಾ ದಿತಾ, ಅನಿ ತುಮಿ ಬೊಲಲ್ಲ್ಯಾಕ್, ದುಸ್ಮಾನಾನಿ ಕೊನ್ಬಿ ಹುರ್‍ಪಾಟಿ ಬೊಲುಕುಚ್ ವಾಟ್ ರ್‍ಹಾಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:15
17 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಾನು ಮಾತನಾಡಲು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಗಳನ್ನು ಭಯವಿಲ್ಲದೆ ತಿಳಿಸುವುದಕ್ಕೆ ಬೇಕಾದ ಮಾತುಗಳನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ಏಕೆಂದರೆ ನೀವು ಹೇಳತಕ್ಕದ್ದನ್ನು ಪವಿತ್ರಾತ್ಮನು ಆ ಗಳಿಗೆಯಲ್ಲಿಯೇ ನಿಮಗೆ ಕಲಿಸಿಕೊಡುವನು” ಅಂದನು.


ಅವನ ಮಾತಿನಲ್ಲಿ ಕಂಡುಬರುತ್ತಿದ್ದ ಜ್ಞಾನವನ್ನೂ, ಪವಿತ್ರಾತ್ಮ ಶಕ್ತಿಯನ್ನೂ ಎದುರಿಸಲಾರದೆ ಹೋದರು.


ಆ ಮೇಲೆ ಅವರು ಶಾಸ್ತ್ರ ವಚನಗಳನ್ನು ತಿಳಿದುಕೊಳ್ಳುವಂತೆ ಆತನು ಅವರ ಮನಸ್ಸುಗಳನ್ನು ತೆರೆದನು.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳಿವಳಿಕೆಯೂ, ವಿವೇಕವೂ ಹೊರಟು ಬರುತ್ತವೆ.


ಅದಕ್ಕೆ ಅಗ್ರಿಪ್ಪನು; “ಅಲ್ಪಪ್ರಯತ್ನದಿಂದ, ನನ್ನನ್ನು ಕ್ರೈಸ್ತನಾಗುವುದಕ್ಕೆ ಒಡಂಬಡಿಸುತ್ತೀಯಾ?” ಎಂದು ಹೇಳಲು


ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.


ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾದರು, ಅವರಿಗೆ ಆ ಪವಿತ್ರಾತ್ಮನು ನೀಡಿದ ಶಕ್ತಿಯ ಪ್ರಕಾರ ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವುದಕ್ಕೆ ಪ್ರಾರಂಭಿಸಿದರು.


“ಆ ದಿನದಲ್ಲಿ ನಾನು ಇಸ್ರಾಯೇಲ್ ವಂಶಕ್ಕೆ ಕೊಂಬನ್ನು ಮೊಳೆಯಿಸಿ, ಆ ವಂಶದವರ ಮಧ್ಯದಲ್ಲಿ ನಿನ್ನ ಬಾಯಿಯನ್ನು ತೆರೆಯುವಂತೆ ಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ನಿಶ್ಚಯವಾಗುವುದು.”


ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು