Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಏಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರು ತನ್ನ ಜನರನ್ನು ಶಿಕ್ಷಿಸುವ ಕಾಲದ ಬಗ್ಗೆ ಪ್ರವಾದಿಗಳು ಬರೆದಿರುವ ಸಂಗತಿಗಳೆಲ್ಲಾ ಆಗ ನೆರವೇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಿ, ದಿಸಾ, ಶಿಕ್ಷೆಚಿ ದಿಸಾ ಮನುನ್ ಬಲ್ವುನ್ ಹೊತ್ಯಾತ್, ಅಶೆ ಹೆ ಸಗ್ಳೆ ಪ್ರವಾದ್ಯಾನಿ ಸಾಂಗಲ್ಲೆ ಖರೆ ಮನುನ್ ದಾಕ್ವುಸಾಟ್ನಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:22
22 ತಿಳಿವುಗಳ ಹೋಲಿಕೆ  

ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.


ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.


ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.


ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು.


ಏಕೆಂದರೆ ಅದು ಯೆಹೋವನು ಮುಯ್ಯಿತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರ್ಷವು ಒದಗಿದೆ.


ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.


ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ,


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ. ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬಿಲೋನಿಗೆ ಪ್ರತಿಕಾರ ಮಾಡುವನು.


ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,


“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.


ಜನಾಂಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ಮತ್ತು ದೇಶಕ್ಕೋಸ್ಕರವೂ ದೋಷ ಪರಿಹಾರಮಾಡುತ್ತಾನೆ.


ಇದನ್ನೆಲ್ಲಾ ನಾನು ಮುದ್ರೆಹಾಕಿ ನನ್ನ ಉಗ್ರಾಣದಲ್ಲಿಟ್ಟುಕೊಂಡಿದ್ದೇನೆ ಅಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು