Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆಗ ಮನುಷ್ಯಕುಮಾರನು ಬಲದಿಂದಲೂ ಬಹುಮಹಿಮೆಯಿಂದಲೂ ಮೇಘದಲ್ಲಿ ಬರುವದನ್ನು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಮನುಷ್ಯಕುಮಾರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಮಾನ್ಸಾಚೊ ಲೆಕ್ ಎಕ್ ಮೊಡಾ ವೈನಾ, ಮೊಟ್ಯಾ ಪದ್ವಿನ್,ಅನಿ ಮಹಿಮೆನ್ ಭರುನ್ ಯೆತಲೊ ತೆಂಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:27
10 ತಿಳಿವುಗಳ ಹೋಲಿಕೆ  

ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


ಆಗ ಮನುಷ್ಯಕುಮಾರನನ್ನು ಸೂಚಿಸುವ ಗುರುತು ಆಕಾಶದಲ್ಲಿ ಕಾಣಬರುವವು. ಆಗ ಭೂಲೋಕದಲ್ಲಿರುವ ಎಲ್ಲಾ ಕುಲದವರು ಎದೆಬಡಕೊಳ್ಳುವರು, ಮತ್ತು ಮನುಷ್ಯಕುಮಾರನು ಬಲದಿಂದಲೂ, ಬಹು ಮಹಿಮೆಯಿಂದಲೂ ಆಕಾಶದ ಮೇಘಗಳ ಮೇಲೆ ಬರುವುದನ್ನು ಕಾಣುವರು.


ಆಗ ಮನುಷ್ಯಕುಮಾರನು ಮಹಾಬಲದಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ನೋಡುವರು.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.


ಆಗ ನಾನು ನೋಡಲಾಗಿ ಇಗೋ, ಒಂದು ಬಿಳಿ ಮೇಘವು ಕಾಣಿಸಿತು. ಆ ಮೇಘದ ಮೇಲೆ ಮನುಷ್ಯಕುಮಾರನಂತಿದ್ದ ಒಬ್ಬಾತನು ಕುಳಿತಿರುವುದನ್ನು ಕಂಡೆನು. ಆತನ ತಲೆಯ ಮೇಲೆ ಚಿನ್ನದ ಕಿರೀಟವೂ, ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.


ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು