ಲೂಕ 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೇಸು ಹೇಳಿದ್ದೇನಂದರೆ, “ನೀವು ಮೋಸಹೋಗದಂತೆ ಎಚ್ಚರವಾಗಿರಿ. ಏಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು ‘ನಾನೇ ಕ್ರಿಸ್ತನು, ನಾನೇ ಕ್ರಿಸ್ತನು’ ಎಂತಲೂ ‘ಆ ಕಾಲ ಹತ್ತಿರವಾಯಿತು’ ಎಂತಲೂ ಹೇಳುವರು. ಅವರ ಹಿಂದೆ ಹೋಗಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನು ಹೇಳಿದ್ದೇನಂದರೆ - ನೀವು ಮೋಸಹೋಗದಂತೆ ನೋಡಿಕೊಳ್ಳಿರಿ. ಯಾಕಂದರೆ ಅನೇಕರು ಬಂದು ನನ್ನ ಹೆಸರನ್ನು ಎತ್ತಿಕೊಂಡು ನಾನು ಕ್ರಿಸ್ತನು ನಾನು ಕ್ರಿಸ್ತನು ಎಂತಲೂ ಆ ಕಾಲ ಹತ್ತಿರವಾಯಿತು ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೇಸು ಅವರಿಗೆ, “ಎಚ್ಚರಿಕೆಯಾಗಿರಿ! ಮೋಸ ಹೋಗಬೇಡಿರಿ. ನನ್ನ ಹೆಸರನ್ನು ಹೇಳುತ್ತಾ ಅನೇಕರು ಬರುವರು. ಅವರು, ‘ನಾನೇ ಕ್ರಿಸ್ತನು’ ಎಂದೂ, ‘ಸರಿಯಾದ ಸಮಯ ಬಂದಿದೆ’ ಎಂದೂ ಹೇಳುವರು. ಆದರೆ ಅವರನ್ನು ಹಿಂಬಾಲಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ತನ್ನಾ ಜೆಜುನ್ ತೆಂಕಾ “ಉಶಾರ್ಕಿನ್ ರ್‍ಹಾವಾ; ಮೊಸಾತ್ ಪಡ್ಸಿಲಾ, ಲೈ ಘೊಮನ್ಸಾ ಮಾಜ್ಯಾ ವಿಶಯಾತ್, ಬೊಲುಕ್ ಮನುನ್ ಯೆತ್ಯಾತ್, ಅನಿ ತೆನಿ ಮಿಯಾ ತೊ! ಅನಿ ಎಳ್ ಯೆವ್ನ್ ಪಾವ್ಲೊ ಅತ್ತಾ” ಮನುನ್ ಸಾಂಗ್ತ್ಯಾತ್, ಖರೆ, ತುಮಿ ತೆಂಚ್ಯಾ ಫಾಟ್ನಾ ಜಾವ್ನಕಾಶಿ. ಅಧ್ಯಾಯವನ್ನು ನೋಡಿ |