Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅವನು ಮೇಲ್ಮಾಳಿಗೆಯಲ್ಲಿ ವಿಶಾಲವಾದ ಹಾಗೂ ಸುಸಜ್ಜಿತವಾದ ಕೊಠಡಿಯೊಂದನ್ನು ತೋರಿಸುವನು. ಅಲ್ಲಿ ಸಿದ್ಧಮಾಡಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಮನೆಯ ಯಜಮಾನನು ಮೇಲಂತಸ್ತಿನಲ್ಲಿ ಒಂದು ದೊಡ್ಡ ಕೋಣೆಯನ್ನು ತೋರಿಸುವನು. ಈ ಕೋಣೆಯು ನಿಮಗಾಗಿ ಸಿದ್ಧವಾಗಿರುವುದು. ಪಸ್ಕದ ಊಟವನ್ನು ಅಲ್ಲಿ ಸಿದ್ಧಮಾಡಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೊ ತುಮ್ಕಾ ಮ್ಹಾಳ್ಗಿ ವರ್‍ತಿ ಎಕ್ ಸಗ್ಳೆ ತಯಾರ್ ಕರುನ್ ಥವಲ್ಲೆ ಖೊಲಿ ದಾಕ್ವುತಾ, ಥೈ ಸಗ್ಳೆ ತಯಾರ್ ಕರುನ್ ಥವಲ್ಲೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:12
7 ತಿಳಿವುಗಳ ಹೋಲಿಕೆ  

ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.


ಆತನು ಪ್ರತಿ ಮನುಷ್ಯನ ಆಂತರ್ಯವನ್ನು ತಿಳಿದವನಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಆತನಿಗೆ ಸಾಕ್ಷಿ ಕೊಡಬೇಕಾದ ಅಗತ್ಯವಿರಲಿಲ್ಲ.


ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.


ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು