Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ, “ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಮೇಲೆ ಆತನು [ದ್ರಾಕ್ಷಾರಸದ] ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತಕ್ಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡಿದನು. ಬಳಿಕ ಆತನು, “ಈ ಪಾತ್ರೆಯಲ್ಲಿರುವ ದ್ರಾಕ್ಷಾರಸವನ್ನು ನೀವೆಲ್ಲರೂ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾ ಜೆಜುನ್ ಎಕ್ ವಾಯ್ನಾನ್ ಭರಲ್ಲೆ ಆಯ್ದಾನ್ ಘೆಟ್ಲ್ಯಾನ್, ಅನಿ ದೆವಾಕ್ ಧನ್ಯವಾದ್ ದಿಲ್ಯಾನ್, ಅನಿ “ಹೆ ಘೆವಾ, ಅನಿ ತುಮ್ಚ್ಯಾ ಮದ್ದಿ ವಾಟುನ್ ಘೆವ್ನ್ ಫಿವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:17
15 ತಿಳಿವುಗಳ ಹೋಲಿಕೆ  

ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.


ರಕ್ಷಣಾಪಾತ್ರೆಯನ್ನು ತೆಗೆದುಕೊಂಡು, ಯೆಹೋವನ ನಾಮವನ್ನು ಪ್ರಖ್ಯಾತಿಪಡಿಸುವೆನು.


ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.


ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.


ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ.


ನೀವು ಹೊಟ್ಟೆ ತುಂಬಾ ಊಟಮಾಡಿ ಸುಖದಿಂದಿರುವಾಗ ನಿಮ್ಮ ದೇವರಾದ ಯೆಹೋವನು ನಿಮಗೆ ಉತ್ತಮ ದೇಶವನ್ನು ಕೊಟ್ಟಿದ್ದಕ್ಕಾಗಿ ಆತನನ್ನು ಸ್ತುತಿಸಬೇಕು.


ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.


ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.


ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.


ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.


ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.


ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು