Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ದೇವರ ಸಾಮ್ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ದೇವರ ರಾಜ್ಯ ಬರುವ ತನಕ, ನಾನೆಂದಿಗೂ ತಿರುಗಿ ದ್ರಾಕ್ಷಾರಸ ಕುಡಿಯುವುದಿಲ್ಲ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಮಿಯಾ ತುಮ್ಕಾ ಸಾಂಗ್ತಾ ಅತ್ತಾಚ್ಯಾನ್, ದೆವಾಚೆ ರಾಜ್ ಯೆಯ್ ಪತರ್ ಮಿಯಾ ಅನಿ ಹಿ ವಾಯ್ನ್ ಫಿ ನಾ”, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:18
22 ತಿಳಿವುಗಳ ಹೋಲಿಕೆ  

ನಾನು ನನ್ನ ತಂದೆಯ ರಾಜ್ಯದಲ್ಲಿ ನಿಮ್ಮ ಸಂಗಡ ಹೊಸದಾಗಿ ದ್ರಾಕ್ಷಾರಸವನ್ನು ಕುಡಿಯುವ ದಿನದವರೆಗೂ ಇನ್ನು ಇದನ್ನು ಕುಡಿಯುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಅಂದನು.


ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ” ಎಂದು ಹೇಳಿದನು.


ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ” ಎಂದನು.


“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.


ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.


ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.


ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.


ಅಲ್ಲಿ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ.


ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.


ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.


ನಾನು ಇದನ್ನು ಸಹ ನಿನಗೆ ಹೇಳುತ್ತೇನೆ, “ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ಶಕ್ತಿಗಳು ಅದನ್ನು ಸೋಲಿಸಲಾರವು.


ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.


ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.


“ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು. ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮಮಾಡಿ ಶಾಶ್ವತವಾಗಿ ನಿಲ್ಲುವುದು.


ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.


ಪ್ರಿಯಳೇ, ವಧುವೇ, ಇಗೋ ನಾ ಬಂದಿರುವೆ ನನ್ನ ತೋಟದೊಳಗೆ, ನನ್ನ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ, ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ, ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ. ಪ್ರಿಯರೇ ಕುಡಿಯಿರಿ, ಬೇಕಾದಷ್ಟು ಪಾನಮಾಡಿರಿ.


ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.


ಅದು ಅವುಗಳಿಗೆ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೋ?’ ಎಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು