Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿರ್ಣಯವಾಗಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಆತನನ್ನು ಹಿಡಿದುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮನುಷ್ಯಕುಮಾರನು ನೇಮಕವಾದ ಪ್ರಕಾರ ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮನುಷ್ಯಕುಮಾರನು ದೇವರ ಯೋಜನೆಗನುಸಾರವಾಗಿ ಮರಣಹೊಂದುವನು. ಆದರೆ ಮನುಷ್ಯಕುಮಾರನನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಡುವ ವ್ಯಕ್ತಿಗೆ ಬಹಳ ಕೇಡಾಗುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ದೆವಾನ್ ನಿರ್‍ದಾರ್ ಕರಲ್ಲ್ಯಾ ಸರ್ಕೆ ಮಾನ್ಸಾಚೊ ಲೆಕ್ ಮರುಕುಚ್ ಪಾಜೆ, ಖರೆ, ತೆಕಾ ಘಾತ್ ಕರುನ್ ಧರುನ್ ದಿತಲ್ಯಾಚಿ ಗತ್ ಮಿಯಾ ಕಾಯ್ ಸಾಂಗು!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:22
26 ತಿಳಿವುಗಳ ಹೋಲಿಕೆ  

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.


ಅನಂತರ, “ಮೊದಲೇ ಪ್ರಕಟವಾದ ಪ್ರಕಾರ ‘ಕ್ರಿಸ್ತನು ಕಷ್ಟ ಪಟ್ಟು, ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದು ಬರುವನೆಂತಲೂ,


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.


ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಯನ್ನೂ ಮುಂದಾಗಿ ತಿಳಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವನೆಂಬುದನ್ನು ಅವರು ಪರಿಶೋಧನೆ ಮಾಡಿದರು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.


ಮನುಷ್ಯಕುಮಾರನು ಆತನ ವಿಷಯವಾಗಿ ಬರೆದಿರುವ ಹಾಗೆ ಹೊರಟುಹೋಗುತ್ತಾನೆ; ಆದರೆ ಯಾವನು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ಗತಿಯನ್ನು ಏನೆಂದು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು” ಅಂದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಖಡ್ಗವೇ, ನಾನು ನೇಮಿಸಿದ ಕುರುಬನೂ, ನನ್ನ ಸಂಗಡಿಗನೂ ಆಗಿರುವವನ ವಿರುದ್ಧ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದುರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.


ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.


ಇದನ್ನು ಕೇಳಿ ಅವರು, ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.


ಆತನೇ ಜೀವವಿರುವವರಿಗೂ, ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನು ಎಂಬುದನ್ನು ಜನರಿಗೆ ಸಾರಿ, ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು