Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇವಿುಸಿದ ಪ್ರಕಾರ ನಾನು ನಿಮಗೂ ನೇವಿುಸುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನನ್ನ ತಂದೆ ನನಗೆ ರಾಜ್ಯವನ್ನು ಕೊಟ್ಟಿದ್ದಾನೆ. ನನ್ನ ಸಂಗಡ ಆಳುವುದಕ್ಕೆ ನಾನು ಸಹ ನಿಮಗೆ ಅಧಿಕಾರ ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಅನಿ ಮಾಜ್ಯಾ ಬಾಬಾನ್ ಮಾಕಾ ಅದಿಕಾರ್ ಚಾಲ್ವುಕ್ ಮನುನ್ ಹಕ್ಕ್ ದಿಲ್ಯಾ ಸರ್ಕೊ, ಮಿಯಾಬಿ ತುಮ್ಕಾ ಅದಿಕಾರ್ ಚಾಲ್ವುಕ್ ಹಕ್ಕ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:29
14 ತಿಳಿವುಗಳ ಹೋಲಿಕೆ  

ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.


ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಅಂಥವನನ್ನು ಅವನು ತನ್ನ ಎಲ್ಲಾ ಆಸ್ತಿಯ ಮೇಲ್ವಿಚಾರಕನನ್ನಾಗಿ ನೇಮಿಸುವನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.


ಅವನು ಅವನಿಗೆ, ‘ಭಲಾ! ನೀನು ಒಳ್ಳೆಯ ಆಳು, ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಗಸ್ತನಾಗಿದ್ದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು’ ಎಂದು ಹೇಳಿದನು.


ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.


ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ.


ನೀವು ಬಾಧೆಗಳಲ್ಲಿ ನಮ್ಮೊಂದಿಗೆ ಪಾಲುಗಾರರಾಗಿರುವ ಪ್ರಕಾರವೇ ಆದರಣೆಯೂ ಪಾಲುಗಾರರಾಗಿದ್ದೀರೆಂದು ತಿಳಿದಿರುವುದರಿಂದ ನಿಮ್ಮ ವಿಷಯದಲ್ಲಿ ನಮಗಿರುವ ನಿರೀಕ್ಷೆಯು ದೃಢವಾಗಿದೆ.


ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.


“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.


ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.


ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ; ನೀನು ಸ್ವಲ್ಪ ಕೆಲಸದಲ್ಲಿ ಪ್ರಾಮಾಣಿಕನಾಗಿದ್ದಿ; ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಒಡೆಯನ ಸಂತೋಷದಲ್ಲಿ ಸೇರು’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು