Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಿನ್ನ ನಂಬಿಕೆಯು ಕುಂದಿಹೋಗಬಾರದೆಂದು ನಾನು ಪ್ರಾರ್ಥಿಸಿದೆನು! ನೀನು ಪರಿವರ್ತನೆಗೊಂಡ ನಂತರ ನಿನ್ನ ಸಹೋದರರನ್ನು ಬಲಪಡಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ, ಸಿಮಾವ್, ತುಜೊ ವಿಶ್ವಾಸ್ ಹಾಲಿನಸ್ತಾನಾ ರ್‍ಹಾವ್‍ಸಾಟ್ನಿ ಮನುನ್ ಮಿಯಾ ಮಾಗ್ನಿ ಕರ್‍ಲಾ, ಅನಿ ತಿಯಾ ಮಾಜೆಕ್ಡೆ ಪರತಲ್ಲ್ಯಾ ತನ್ನಾ ತಿಯಾ ತುಜ್ಯಾ ಭಾವಾಕ್ನಿ ಧೈರೊ ದಿ”, ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:32
33 ತಿಳಿವುಗಳ ಹೋಲಿಕೆ  

ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತನಾಗಿದ್ದಾನೆ. ಯಾಕೆಂದರೆ ಅವರಿಗೋಸ್ಕರ ವಿಜ್ಞಾಪನೆ ಮಾಡುವುದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.


ಅಂತ್ಯ ಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಯು ನಂಬುವವರಾದ ನಿಮಗೆ ದೊರೆಯಬೇಕೆಂದು ದೇವರು ನಿಮ್ಮನ್ನು ತನ್ನ ಶಕ್ತಿಯಿಂದ ಕಾಪಾಡುತ್ತಾನೆ.


ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.


ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಅವರಿಗೆ, “ನಿಮ್ಮ ಮನಸ್ಸು ಪರಿವರ್ತನೆಕೊಂಡು ಚಿಕ್ಕ ಮಕ್ಕಳಂತೆ ಆಗದೇ ಹೋದರೆ ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅವರು ನಮ್ಮಿಂದ ಹೊರಟುಹೋದವರು. ಏಕೆಂದರೆ ಅವರು ನಮ್ಮವರಾಗಿರಲಿಲ್ಲ. ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟುಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ಸ್ಪಷ್ಟವಾಗಿ ತೋರಿಬಂದಿದೆ.


ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವುದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ. ನಾನು ಜೀವಿಸುವುದರಿಂದ ನೀವು ಜೀವಿಸುವಿರಿ.


ಆಗ ಪೇತ್ರನು, “ಕೋಳಿ ಎರಡು ಸಾರಿ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಬಾರಿ ನಿರಾಕರಿಸುವೆ” ಎಂದು ಯೇಸು ತನಗೆ ಹೇಳಿದ ಮಾತನ್ನು ನೆನಪಿಗೆ ಬಂದ ಕಾರಣ, ವ್ಯಥೆಪಟ್ಟು ದುಃಖಭರಿತನಾಗಿ ಅತ್ತನು.


ಆದರೆ ನೀವು ಹೋಗಿ ಆತನ ಶಿಷ್ಯರಿಗೂ ಪೇತ್ರನಿಗೂ ಆತನು ನಿಮಗೆ ಹೇಳಿದಂತೆ ನಿಮಗಿಂತ ಮೊದಲು ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ” ಎಂದು ಹೇಳಿದನು.


ಪೇತ್ರನಿಗೆ ಯೇಸು, “ಹುಂಜವೂ ಕೂಗುವುದಕ್ಕಿಂತ ಮೊದಲೇ ಮೂರು ಸಾರಿ ನನ್ನನ್ನು ನಿರಾಕರಿಸುವಿ” ಎಂದು ಹೇಳಿದ ಮಾತನ್ನು ನೆನಪಿಸಿಕೊಂಡು ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೋಸ್ಕರ ಒಪ್ಪಿಸಿಕೊಟ್ಟನಲ್ಲಾ, ಮಗನನ್ನು ಕೊಟ್ಟ ಮೇಲೆ ಸಮಸ್ತವನ್ನೂ ನಮಗೆ ದಯಪಾಲಿಸದೆ ಇರುವನೋ?


ದೇವರ ಸೇವಕನೂ, ಯೇಸು ಕ್ರಿಸ್ತನ ಅಪೊಸ್ತಲನೂ ಆಗಿರುವ ಪೌಲನು, ನಮ್ಮೆಲ್ಲರಿಗೆ ಹುದುವಾದ ನಂಬಿಕೆಯಲ್ಲಿ ನಿಜಕುಮಾರನಾಗಿರುವ ತೀತನಿಗೆ ಬರೆಯುವ ಪತ್ರ.


ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು