Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:69 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

69 ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

69 ಇನ್ನು ಮುಂದೆ ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

69 ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

69 ಆದರೆ ಇಂದಿನಿಂದ ಮನುಷ್ಯಕುಮಾರನು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

69 ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

69 ಖರೆ ಅತ್ತಾಚ್ಯಾನ್ ಫಿಡೆ, ಮಾನ್ಸಾಚೊ ಲೆಕ್, ಪರಮೊನ್ನತ್ ದೆವಾಚ್ಯಾ ಉಜ್ವ್ಯಾ ಬಾಜುಕ್ ಬಸ್ತಾ!” ಮಟ್ಲ್ಯಾನ್

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:69
19 ತಿಳಿವುಗಳ ಹೋಲಿಕೆ  

ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.


ಕರ್ತನಾದ ಯೇಸು ಅವರೊಂದಿಗೆ ಮಾತನಾಡಿದ ಮೇಲೆ ಪರಲೋಕಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.


ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.


ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.


“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನೆಂದರೆ, ಪರಲೋಕದೊಳಗೆ ಮಹೋನ್ನತನ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.


ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ ಮೇಲಿನವುಗಳನ್ನೇ ಹುಡುಕಿರಿ, ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.


ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?


ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು