Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರಿಗೆ - ಈ ಮನುಷ್ಯನು ಪ್ರಜೆಗಳನ್ನು ತಿರುಗಿಬೀಳುವಂತೆ ಮಾಡುವವನು ಎಂದು ಇವನನ್ನು ನನ್ನ ಬಳಿಗೆ ತಂದಿರಲ್ಲಾ; ನೀವು ಇವನ ಮೇಲೆ ತಂದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆಮಾಡಿದರೂ ಇವನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರಿಗೆ, “ನೀವು ಈ ಮನುಷ್ಯನನ್ನು (ಯೇಸುವನ್ನು) ನನ್ನ ಬಳಿಗೆ ಕರೆದುಕೊಂಡು ಬಂದಿರಿ. ಇವನು ಜನರನ್ನು ತಪ್ಪುದಾರಿಗೆ ನಡೆಸುತ್ತಿದ್ದಾನೆ ಎಂದು ಹೇಳಿದಿರಿ. ಆದರೆ ನಾನು ನಿಮ್ಮೆಲ್ಲರ ಮುಂದೆ ಇವನನ್ನು ವಿಚಾರಣೆ ಮಾಡಿದೆನು. ಆದರೆ ನಾನು ಇವನಲ್ಲಿ ಯಾವ ತಪ್ಪನ್ನೂ ಕಾಣಲಿಲ್ಲ. ನಿಮ್ಮ ದೋಷಾರೋಪಣೆಗಳು ಇವನಿಗೆ ಅನ್ವಯಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಜನರು ತಿರುಗಿ ಬೀಳುವಂತೆ ಮಾಡುತ್ತಾನೆಂದು ನೀವು ಈತನನ್ನು ನನ್ನ ಬಳಿಗೆ ತಂದಿದ್ದೀರಿ. ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ಅಪರಾಧವೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ತೆಂಕಾ,“ಲೊಕಾಕ್ನಿ ಚುಕ್ ವಾಟೆನ್ ನ್ಹೆವ್ಲಾ ಮನುನ್ ಹ್ಯಾ ಮಾನ್ಸಾಕ್ ತುಮಿ ಮಾಜೆಕ್ಡೆ ಘೆವ್ನ್ ಯೆಲ್ಯಾಶಿ, ಅನಿ ಅತ್ತಾ ತುಮ್ಚ್ಯಾ ಇದ್ರಾಕುಚ್ ಮಿಯಾ ತೆಚಿ ಪರಿಕ್ಷಾ ಕರುನ್ ಬಗಟ್ಲೊ, ಅನಿ ತುಮಿ ಸಾಂಗಟಲ್ಲಿ ಎಕ್‍ಬಿ ಚುಕ್ ತೆನಿ ಕರ್‍ಲ್ಯಾನಾಯ್ ಮನುನ್ ಮಾಕಾ ತರ್ ಕಾಯ್ ದಿಸಿನಾ ಹೊಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:14
10 ತಿಳಿವುಗಳ ಹೋಲಿಕೆ  

ಹೀಗಿರಲು ಮುಖ್ಯಾಧಿಕಾರಿಗಳೂ, ದೇಶಾಧಿಪತಿಗಳೂ ಅಸೂಯೆಯಿಂದ ರಾಜ್ಯಭಾರದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವನ್ನೂ, ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ನಂಬಿಗಸ್ತನೇ ಆಗಿದ್ದನು, ಅವನಲ್ಲಿ ಆಲಸ್ಯವಾಗಲಿ, ಅಕ್ರಮವಾಗಲಿ ಸಿಕ್ಕಲಿಲ್ಲ.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು