Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅವನು ಮೂರನೆಯ ಸಾರಿ, “ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ ಆದುದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ” ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಮೂರನೇ ಸಲ ಪಿಲಾತನು ಜನರಿಗೆ, “ಏಕೆ? ಆತನು ಏನು ತಪ್ಪುಮಾಡಿದನು? ಆತನು ತಪ್ಪಿತಸ್ಥನಲ್ಲ. ಆತನನ್ನು ಕೊಲ್ಲಿಸುವುದಕ್ಕೆ ನನಗೆ ಯಾವ ಕಾರಣವೂ ಕಾಣಿಸುವುದಿಲ್ಲ. ಆದ್ದರಿಂದ ಆತನನ್ನು ಸ್ವಲ್ಪ ಶಿಕ್ಷಿಸಿ ಬಿಟ್ಟುಬಿಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಪಿಲಾತನು ಮೂರನೆಯ ಸಾರಿ ಅವರಿಗೆ, “ಏಕೆ? ಈತನು ಮಾಡಿದ ಅಪರಾಧವೇನು? ಈತನಲ್ಲಿ ಮರಣದಂಡನೆಗೆ ಕಾರಣವಾದದ್ದೇನೂ ನನಗೆ ಕಾಣಲಿಲ್ಲ. ಆದ್ದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಪಿಲಾತಾನ್ ತಿನ್ವೆಪಟಿ ತೆಂಕಾ “ಖರೆ, ಮರ್‍ನಾಚಿ ಶಿಕ್ಷಾ ದಿ ಸರ್ಕೆ ಕಸ್ಲಿ ಚುಕ್ ತೆನಿ ಕರ್‍ಲ್ಯಾನಾಯ್, ಮಾಕಾ ತರ್ ತೆಚಿ ಕಸ್ಲಿಬಿ ಚುಕ್ ಗಾವುಕ್ನಾ, ತಸೆ ಮನುನ್ ಮಿಯಾ ತೆಕಾ ಬಾರ್‍ಕೊಲಾನಿ ಮಾರುಕ್‍ಲಾವ್ತಾ, ಅನಿ ಸೊಡುನ್ ದಿತಾ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:22
8 ತಿಳಿವುಗಳ ಹೋಲಿಕೆ  

ಅವರಿಗೆ, “ಈ ಮನುಷ್ಯನು ಪ್ರಜೆಗಳನ್ನು ತಿರಿಗಿ ಬೀಳುವಂತೆ ಮಾಡುವವನು ಎಂದು ಈತನನ್ನು ನನ್ನ ಬಳಿಗೆ ಕರೆತಂದಿರಲ್ಲಾ. ನೀವು ಈತನ ಮೇಲೆ ಮಾಡಿದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆ ಮಾಡಿದರೂ ಈತನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ಪುನಃ ಅವರ ಸಂಗಡ ಮಾತನಾಡಿದನು.


ಆದುದರಿಂದ ನಾನು ಈತನನ್ನು ಹೊಡಿಸಿ ಬಿಟ್ಟು ಬಿಡುತ್ತೇನೆ” ಎಂದು ಹೇಳಿದನು.


ಪಿಲಾತನು ಮುಖ್ಯಯಾಜಕರಿಗೂ, ಜನರ ಗುಂಪಿಗೂ, “ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುತ್ತಿಲ್ಲವೆಂದು” ಹೇಳಿದನು.


ಆದರೆ ಅವರು, “ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು” ಎಂದು ಕೂಗುತ್ತಿದ್ದರು.


ಆದರೆ ಅವರು ಜೋರಾಗಿ ಕೂಗುತ್ತಾ, ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು. ಅವರ ಕೂಗಾಟವು ಗೆದ್ದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು