ಲೂಕ 23:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಯೇಸುವನ್ನೂ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಮತ್ತೊಬ್ಬನನ್ನು ಎಡಗಡೆಯಲ್ಲಿಯೂ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು, ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಆತನ ಎಡಗಡೆಯಲ್ಲಿ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯೇಸುವನ್ನು ಮತ್ತು ಇಬ್ಬರು ದುಷ್ಕರ್ಮಿಗಳನ್ನು ಅವರು “ಕಪಾಲ”ವೆಂಬ ಸ್ಥಳಕ್ಕೆ ಕರೆದುಕೊಂಡು ಹೋದರು. ಅಲ್ಲಿ ಸೈನಿಕರು ಯೇಸುವನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗಳಿಗೆ ಜಡಿದರು. ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿಯೂ ಇನ್ನೊಬ್ಬನನ್ನು ಯೇಸುವಿನ ಎಡಗಡೆಯಲ್ಲಿಯೂ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಅಶೆ ತೆನಿ “ಟಕ್ಲ್ಯಾಚ್ಯಾ ಬುರ್‍ಡ್ಯಾಚೊ ಜಾಗೊ” ಮನ್ತಲ್ಯಾ ಜಾಗ್ಯಾರ್ ಯೆವ್ನ್ ಪಾವಲ್ಲ್ಯಾ ತನ್ನಾ ತೆನಿ ಜೆಜುಕ್ ಕುರ್ಸಾರ್ ಮಾರ್‍ಲ್ಯಾನಿ, ಅನಿ ತ್ಯಾ ದೊಗ್ಯಾ ಚೊರಾಕ್ನಿ, ಎಕ್ಲ್ಯಾಕ್ ಜೆಜುಚ್ಯಾ ಉಜ್ವ್ಯಾಬಾಜುಕ್, ಅನಿ ಎಕ್ಲ್ಯಾಕ್ ಡಾವ್ಯಾ ಬಾಜುಕ್ ಕುರ್ಸಾರ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |