Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತೇವೆ. ಈತನಾದರೋ ಅಂತಹದ್ದೇನನ್ನೂ ಮಾಡಲಿಲ್ಲ” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ಅಲ್ಲದ್ದೇನೂ ಮಾಡಲಿಲ್ಲ ಎಂದು ಹೇಳಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಅಮ್ಕಾ ತರ್ ಹಿ. ಶಿಕ್ಷಾ ಗಾವಲ್ಲಿ, ಬರಬ್ಬರ್ ಹಾಯ್ , ಕಶ್ಯಾಕ್ ಮಟ್ಲ್ಯಾರ್ ಅಮಿ ಕರಲ್ಲ್ಯಾ ಚುಕಾಕ್ನಿ ಅಮ್ಕಾ ಹಿ ಶಿಕ್ಷಾ ಹೊವ್ಕುಚ್ ಪಾಜೆ, ಖರೆ ತೆನಿ ಕಾಯ್ಬಿ ಚುಕ್ ಕರಲ್ಲಿ ನಾ”, ಮನುನ್ ಜೊರ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:41
19 ತಿಳಿವುಗಳ ಹೋಲಿಕೆ  

ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.


ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.


ಇದಲ್ಲದೆ ಅವನು ನ್ಯಾಯಾಸನದಲ್ಲಿ ಕುಳಿತಿರುವಾಗ ಅವನ ಹೆಂಡತಿಯು, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ; ಅವನ ದೆಸೆಯಿಂದ ಈ ಹೊತ್ತು ಕನಸಿನಲ್ಲಿ ಬಹಳ ತೊಂದರೆ ಪಟ್ಟೆನು” ಎಂದು ಅವನ ಬಳಿಗೆ ಸಂದೇಶ ಹೇಳಿಕಳುಹಿಸಿದಳು.


ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,


ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.


ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲು


ಅದಕ್ಕೆ ಎರಡನೆಯವನು ಅವನನ್ನು ಗದರಿಸಿ, “ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವುದಿಲ್ಲವೋ?


“ಯೇಸುವೇ ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಪಿಸಿಕೋ” ಅಂದನು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.


ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು